ನಿವೃತ್ತಿ ಜೀವನ ಸುಖಕರವಾಗಿರಲಿ: ಮಾಗಿ

ಬಾದಾಮಿ,ಜೂ1:ಸರಕಾರಿ ನೌಕರರಾಗಿ ತಮ್ಮ ಸೇವಾವಧಿಯಲ್ಲಿ ಉತ್ತಮ ಕೆಲಸ ಮಾಡಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿದ್ದಾರೆ. ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ.ಮಾಗಿ ಹೇಳಿದರು.
ಅವರು ಸೋಮವಾರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಸೇವೆಯಿಂದ ನಿವೃತ್ತರಾದ ದೈಹಿಕ ಶಿಕ್ಷಣ ಪರಿವೀಕ್ಷಕ ವಿ.ಎಸ್.ಮೇಟಿ ಮತ್ತು ಸ್ಥಳೀಯ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಿ.ಎಫ್.ಹೊರಕೇರಿ ಇವರಿಗೆ ಸನ್ಮಾನಿಸಿ, ಮಾತನಾಡಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವಿ.ಎಸ್.ಮೇಟಿ ಮತ್ತು ಬಿ.ಎಫ್.ಹೊರಕೇರಿ ನಮ್ಮ ಸೇವೆ ತೃಪ್ತಿ ತಂದಿದೆ. ಇದುವರೆಗೂ ಸಹಕಾರ ನೀಡಿದ ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಸಂಯೋಜಕರು, ಬಿಇಒ ಕಚೇರಿಯ ಸಿಬ್ಬಂದಿ, ಶಿಕ್ಷಕರು ಹಾಜರಿದ್ದರು.