
ಹಿರಿಯೂರು ಮೇ 1- ಚಿತ್ರದುರ್ಗದ ಸಂಚಾರಿ ಪೊಲೀಸ್ ಠಾಣೆಯ ಎ ಎಸ್ ಐ ಲಕ್ಷ್ಮಣ ರೆಡ್ಡಿ, ಜಿಲ್ಲಾ ಪೊಲೀಸ್ ಕಚೇರಿಯ ಎ ಎಸ್ ಐ ನಾಗರಾಜ್ ಮತ್ತು ಹಿರಿಯೂರು ತಾಲೂಕಿನ ಅಬ್ಬಿನಹೊಳೆ ಪೊಲೀಸ್ ಠಾಣೆಯ ಎ ಎಸ್ ಐ ಶ್ರೀನಿವಾಸ್ ಇವರು ವಯೋ ನಿವೃತ್ತಿ ಹೊಂದಿರುವುದರಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.