ನಿವೃತ್ತ ಐಎಸ್‍ಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ ಬಿಜೆಪಿಗೆ


ಸಂಜೆವಾಣಿ ವಾರ್ತೆ
ಹೊಸಪೇಟೆ ಫೆ7: ನಿವೃತ್ತ ಐಎಸ್‍ಎಸ್ ಅಧಿಕಾರಿ ಲಕ್ಷ್ಮೀ ನಾರಾಯಣ ಅವರು ಕುಟುಂಬ ಸಮೇತ ಸೋಮವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಸಚಿವ ಆನಂದ್ ಸಿಂಗ್, ಸಂಸದ ವೈ ದೇವೇಂದ್ರಪ್ಪ ಹಾಗೂ ಬಿಜೆಪಿ ವಿಜಯನಗರ ಜಿಲ್ಲಾಧ್ಯಕ್ಷ ಚೆನ್ನ ಬಸವನಗೌಡ ಪಾಟೀಲರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅವಧಿಯಲ್ಲಿ ಐಎಎಸ್ ಅಧಿಕಾರಿಯಾಗಿ ಕೆಲಸ ಮಾಡಿರುವ ಲಕ್ಷ್ಮೀ ನಾರಾಯಣ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಪ್ರಬಲ ಆಂಕಾಕ್ಷಿಯಾಗಿದ್ದಾರೆ. 
ಬಿಜೆಪಿ ತತ್ವ ಸಿದ್ದಾಂತ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿಯವರ ಜನಪರ ಕೆಲಸಗಳನ್ನು ಮೆಚ್ಚಿಕೊಂಡು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿರುವೆ. ಜನ ಸೇವೆ ಮಾಡುವ ಇಚ್ಚೆಯಿಂದ ನಾನು ರಾಜಕೀಯ ರಂಗಕ್ಕೆ ಪ್ರವೇಶ ಮಾಡಿರುವೆ.
ಲಕ್ಷ್ಮೀ ನಾರಾಯಣ,
ನಿವೃತ್ತ ಐಎಎಸ್ ಅಧಿಕಾರಿ,