ನಿವೃತ್ತ ಪೊಲೀಸರಿಗೆ ಆತ್ಮೀಯ ಬೀಳ್ಕೊಡುಗೆ

ಚಿತ್ರದುರ್ಗ.ಆ.೧;ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಭಾನುವಾರ ವಯೋ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಳೊಡುಗೆ ನೀಡಲಾಯಿತು.ವಯೋನಿವೃತ್ತಿ ಹೊಂದಿದ ಚಿತ್ರಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಜಯಪ್ರಕಾಶ್, ಕೋಟೆ ಪೊಲೀಸ್ ಠಾಣೆಯ ಎಎಸ್‍ಐ ಟಿ.ಕೆಂಚಪ್ಪ, ನಾಯಕನಹಟ್ಟಿ ಪೊಲೀಸ್ ಠಾಣೆಯ ಎಎಸ್‍ಐ ಈರಣ್ಣ ಹಾಗೂ ಹೊಸದುರ್ಗ ಪೊಲೀಸ್ ಠಾಣೆಯ ಎಎಸ್‍ಐ ಅಲಕೂರಯ್ಯ ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರು ಶಾಲು ಹೊದಿಸಿ, ಆತ್ಮೀಯವಾಗಿ ಸನ್ಮಾನಿಸಿ, ಹಣ್ಣು-ಹಂಪಲು ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿ, ನಿವೃತ್ತರ ಸೇವೆಯನ್ನು ಶ್ಲಾಘಿಸಿದರು. ನಂತರ ಮಾತನಾಡಿದ ಅವರು, ನಿಮ್ಮಗಳ ನಿವೃತ್ತಿ ಜೀವನ ಸುಖಕರವಾಗಿರಲೆಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಎಸ್‍ಪಿ ಕಚೇರಿಯ ಆಡಳಿತಾಧಿಕಾರಿ ಪುಷ್ಪ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.

Attachments area