ನಿವೃತ್ತ ಶಿಕ್ಷಕಿಯರಿಗೆ ಬೀಳ್ಕೊಡುಗೆ ಸಮಾರಂಭ

ಸುಳ್ಯ, ಏ.೧- ಜಾಲ್ಸೂರು ಗ್ರಾಮದ ಸೋಣಂಗೇರಿ ಕ್ಲಸ್ಟರ್ ನ ಜಾಲ್ಸೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿಗೊಂಡ ವರಿಗೆ ಬೀಳ್ಕೊಡುಗೆ ಸಮಾರಂಭ ಇತ್ತಿಚೆಗೆ ನಡೆಯಿತು.
ಕದಿಕಡ್ಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಫ್ರೀಡಾ ಐಡಾ ಲೂವೀಸ್ ಮತ್ತು ಅಡ್ಕಾರು ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಪುಷ್ಪಾವತಿ ಅವರಿಗೆ ಸೋಣಂಗೇರಿ ಕ್ಲಸ್ಟರ್ ವತಿಯಿಂದ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಸುಳ್ಯ ಕ್ಷೇತ್ರ ಶಿಕ್ಷಣಧಿಕಾರಿ ಎಸ್.ಪಿ. ಮಹದೇವ ಅವರು ಅಧ್ಯಕ್ಷತೆಯಲ್ಲಿನಡೆಯಿತು. ಕ್ಷೇತ್ರ ಸಮನ್ವಯ ಅಧಿಕಾರಿ ವೀಣಾ ಎಂ ಟಿ., ಶಿಕ್ಷಣ ಸಂಯೋಜಕ ವಸಂತ ಏನೆಕಲ್ಲು, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ವಾಣಿ.ಸೋಣಂಗೇರಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಸವಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸೋಣಂಗೇರಿ ಕ್ಲಸ್ಟರ್ ನ ಮುಖ್ಯೋಪಾಧ್ಯಾಯರುಗಳು ಹಾಗೂ ಸಹಶಿಕ್ಷಕರು ಕಾರ್ಯಕ್ರಮದಲ್ಲಿ
ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಮೀಳಾ ನಿಡುಬೆ ಪ್ರಾರ್ಥಿಸಿ, ಪ್ರಭಾರ ಮುಖ್ಯಶಿಕ್ಷಕಿ ಸವಿತ
ಸ್ವಾಗತಿಸಿದರು. ಸಹ ಶಿಕ್ಷಕ ಶಶಿಧರ್ ವಂದಿಸಿ, ಸಹ ಶಿಕ್ಷಕಿ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.