
ಕಲಬುರಗಿ,ಮಾ.4: ಜಿಲ್ಲೆಯ ಆಳಂದ್ ತಾಲ್ಲೂಕಿನ ಕಮಲಾನಗರದ ನಿಸರ್ಗ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ದ್ವಿದಶಮಾನೋತ್ಸವ ಕಾರ್ಯಕ್ರಮದ ನಿಮಿತ್ಯ ಇದೇ ಮಾರ್ಚ್ 5ರಂದು ಸಾಯಂಕಾಲ 4.30ಕ್ಕೆ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸುವರ್ಣ ಭವನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ನಿಸರ್ಗ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಧೂಳಪ್ಪ ದ್ಯಾಮನಕರ್ ಅವರು ತಿಳಿಸಿದ್ದಾರೆ.
ಸಮಾಜ ಸೇವಕಿ ಶ್ರೀಮತಿ ಜಯಶ್ರೀ ಬಸವರಾಜ್ ಮತ್ತಿಮೋಡ್ ಅವರು ಉದ್ಘಾಟಿಸಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ್ ಬಡಿಗೇರ್ ಅವರು ಅಧ್ಯಕ್ಷತೆ ವಹಿಸುತ್ತಾರೆ. ಖಜೂರಿಯ ಮುರುಘೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾಂಗ್ರೆಸ್ ಮುಖಂಡ ನೀಲಕಂಠರಾವ್ ಮೂಲಗೆ, ನೆಹರು ಯುವ ಕೇಂದ್ರದ ಸಮನ್ವಯಧಿಕಾರಿ ಹರ್ಷಲ್ ಕಳಸ್ಕರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಎನ್. ಕಪನೂರ್, ಸಮಾಜ ಸೇವಕ ಸುನೀಲ್ ವಂಟಿ, ಜಿಪಿಎಸ್ ನಿರ್ದೇಶಕ ಎಂ.ಬಿ. ಧನ್ನಿ, ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಅಧ್ಯಕ್ಷ ಸಚಿನ್ ಫರತಾಬಾದ್ ಅವರು ಭಾಗವಹಿಸುತ್ತಾರೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 20 ಜನ ಸಾಧಕರಿಗೆ ನಿಸರ್ಗ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ತಿಳಿಸಿದ್ದಾರೆ.