ನಿಸ್ವಾರ್ಥವಾಗಿ ಸಮಾಜ ಸೇವೆಯಲ್ಲಿ ತೊಡಗಿ

ಧಾರವಾಡ,ಸೆ22 : ಸ್ವಾರ್ಥವಿಲ್ಲದೆ ಸಮಾಜದ ಸೇವೆಯಲ್ಲಿ ತೊಡಗಬೇಕು ಎಂದು ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಚ್. ಮಿತಲಕೋಡ ಹೇಳಿದರು.
ಧಾರವಾಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಧಾರವಾಡ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಬಣಜಿಗ ಸಮಾಜ ದೊಡ್ಡ ಸಂಘಟಿತ ಸಮಾಜ. ಉತ್ತಮ ಸಂಸ್ಕಾರ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.
ಬಡ ಜನರ ಕಲ್ಯಾಣ ಹಾಗೂ ವಿದ್ಯಾರ್ಥಿಗಳ ಸಾಧನೆಗೈಯಲು ಸಮಾಜ ಪೂರಕವಾಗಿ ಕೆಲಸ ಮಾಡಬೇಕು ಹಾಗೂ ಪೆÇ್ರೀತ್ಸಾಹ ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಶೇಖರ್ ಕವಳಿ, ಕೆಎಸ್‍ಆರ್‍ಟಿಸಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಸಾವಕಾರ, ಹಿರಿಯರಾದ ಪೆÇ್ರ. ವಿ.ಸಿ ಸವಡಿ ಪ್ರಧಾನ ಕಾರ್ಯದರ್ಶಿ ವಿರೇಶ ಕೇಲಗೇರಿ, ಗೌರವ ಅಧ್ಯಕ್ಷ ರಾಜಶೇಖರ ಉಪ್ಪಿನ, ಸಂಘಟನಾ ಕಾರ್ಯದರ್ಶಿ ಶಿವಾನಂದ ಕವಳಿ, ಮುಖಂಡ ಶರಣಪ್ಪ ಕೊಟಗಿ, ಅರುಣ ಶೀಲವಂತ ಸೇರಿದಂತೆ ಹಲವರು ಭಾಗವಹಿಸಿದ್ದರು.