ನೀಟ್ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಪಾಸಾದ ಮಲ್ಲಿಕಾರ್ಜುನ ಮತ್ತು ಭಗವಂತ

ಬೀದರ್:ಎ.28: ಕರ್ನಾಟಕ ಕಾಲೇಜಿನಲ್ಲಿ ಈಗಾಗಲೇ ಪಿಜಿ ವಿದ್ಯಾರ್ಥಿಗಳಿಗಾಗಿ ಸುಮಾರು ಒಂದು ವರ್ಷದಿಂದ ನೆಟ್ ಪರೀಕ್ಷೆಯ ತರಬೇತಿ ನೀಡಲಾಗುತಿದ್ದು, ಹಲವಾರು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುತಿದ್ದಾರೆ.
ಅದರಲ್ಲಿ ಕಾಲೇಜಿನ ಮಲ್ಲಿಕಾರ್ಜುನ ತಂದೆ ಸುರೇಶ ಎಂ.ಕಾಂ ಓದುತಿದ್ದು ಈ ಬಾರಿಯ ಯುಜಿಸಿ ನೆಟ್ ಪರೀಕ್ಷೆಯಲ್ಲಿ 90.66% ಪ್ರತಿಶತ ಹಾಗೂ ಇನ್ನೋರ್ವ ವಿದ್ಯಾರ್ಥಿ ಭಗವಂತ ಜಗನ್ನಾಥ 84.87% ಪ್ರತಿಶತ ಅಂಕಗಳನ್ನು ಪಡೆದು ಅಗ್ರಶ್ರೇಣಿಯಲ್ಲಿ ಪಾಸಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗಾಗಿ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಜಾಬಶೆಟ್ಟಿ ಅವರು ವಿಶೇಷ ಕಾಳಜಿ ವಹಿಸುತಿದ್ದು, ಹೊರಗಿನಿಂದ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ವಿದ್ಯಾರ್ಥಿಗಳಿಗೆ ತರಬೇತಿ ಕೊಡಿಸುತಿದ್ದಾರೆ. ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ ಹಂಗರಗಿ ತಿಳಿಸಿದ್ದಾರೆ. ಮಕ್ಕಳ ಈ ಸಾಧನೆಗೆ ಕರಾಶಿ ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ.ಶೆಟಕಾರ, ಕಾರ್ಯದರ್ಶಿ ಸಿದ್ರಾಮ ಪಾರಾ, ಜಂಟಿ ಕಾರ್ಯದರ್ಶಿ ಸತೀಶ ಪಾಟೀಲ, ನಿರ್ದೇಶಕರಾದ ಸಿದ್ಧರಾಜ ಪಾಟೀಲ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶಶಿಧರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.