ನೀಟ್ ಪರೀಕ್ಷೆಯಲ್ಲಿ ಅನುತ್ತೀರ್ಣ ವಿದ್ಯಾರ್ಥಿನಿ ಆತ್ಮಹತ್ಯೆ


ತಿರುವಳ್ಳೂರು, ಸೆ. ೮- ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುವಳ್ಳೂರಿನ ಇಂದಿರಾನಗರದಲ್ಲಿ ಸಂಭವಿಸಿದೆ.
ನೇಣಿಗೆ ಶರಣಾದ ವಿದ್ಯಾರ್ಥಿನಿಯನ್ನು ೧೯ ವರ್ಷದ ಲಕ್ಷ್ಮಣ ಸ್ವೇಧ ಎಂದು ಗುರುತಿಸಲಾಗಿದೆ. ಫಲಿತಾಂಶದಿಂದ ಮನನೊಂದು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ. ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ನಿನ್ನೆಯಷ್ಟೇ ನೀಟ್ ಫಲಿತಾಂಶ ಪ್ರಕಟಗೊಂಡಿತ್ತು. ೯.೯ ಲಕ್ಷ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಒಟ್ಟು ೧೭.೬೪ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಕನ್ನಡ, ಮಲೆಯಾಳಂ, ಮರಾಠಿ ಸೇರಿದಂತೆ ೧೩ ಭಾಷೆಗಳಲ್ಲಿ ನೀಟ್ ಪರೀಕ್ಷೆ ನಡೆದಿತ್ತು.