ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನೆ ಬಿಟ್ಟು ಹೋದ ವಿದ್ಯಾರ್ಥಿನಿ

ಕಲಬುರಗಿ,ಸೆ.10-ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಬಾರದೇ ಇರುವುದರಿಂದ ಮನನೊಂದ ವಿದ್ಯಾರ್ಥಿನಿಯೊಬ್ಬಳು ಮನೆ ತೊರೆದು ಹೋದ ಘಟನೆ ನಗರದಲ್ಲಿ ನಡೆದಿದೆ.
ಇಲ್ಲಿನ ವಿದ್ಯಾ ನಗರದ ಮೋನಿಕಾ ದಯಾನಂದ ಶಾಸ್ತ್ರಿ (19) ಎಂಬ ವಿದ್ಯಾರ್ಥಿನಿಯೇ ಮನೆ ಬಿಟ್ಟು ಹೋಗಿದ್ದು, ಈ ಸಂಬಂಧ ಮೋನಿಕಾ ಅವರ ತಂದೆ ದಯಾನಂದ ಶಾಸ್ತ್ರಿ ಅವರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿ ಮನೆ ಬಿಟ್ಟು ಹೋದ ತಮ್ಮ ಮಗಳನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.
ಮೋನಿಕಾ 2021ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಮುಗಿಸಿದ್ದು, ನಂತರ ನೀಟ್ ಪರೀಕ್ಷೆ ಬರೆದಿದ್ದಳು. ಇತ್ತೀಚೆಗೆ ನೀಟ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಅದರಲ್ಲಿ ಉತ್ತಮ ಅಂಕ ಗಳಿಸದ ಕಾರಣ ಮನನೊಂದು ಸೆ.9 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಯಿಂದ ಹೊರ ಹೋಗಿದ್ದಾಳೆ. ನಗರದ ಎಲ್ಲಾ ಕಡೆ ಹುಡುಕಾಡಿ ಸಂಬಂಧಿಕರಿಗೆ ಫೋನ್ ಮಾಡಿ ವಿಚಾರಿಸಿಲಾಗಿದ್ದು ಅವಳ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಮೋನಿಕಾ ಮನೆಯಿಂದ ಹೊರ ಹೋಗುವಾಗ ಹಸಿರು ಬಣ್ಣದ ಟೀಶರ್ಟ, ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ಮರಾಠಿ ಭಾಷೆಗಳನ್ನು ಮಾತನಾಡುತ್ತಾಳೆ. 5.5 ಅಡಿ ಎತ್ತರವಿದ್ದು, ದುಂಡು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದಾಳೆ.
ಕಾಣೆಯಾದ ಮೋನಿಕಾ ಬಗ್ಗೆ ಸುಳಿವು ಸಿಕ್ಕಲ್ಲಿ ಅಶೋಕನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08472-263617, 9480803545, ಕಲಬುರಗಿ ಕಂಟ್ರೋಲ್ ರೂಂ.ದೂರವಾಣಿ ಸಂಖ್ಯೆ:08472-100, 263608ಗೆ ಸಂಪರ್ಕಿಸಲು ಕೋರಲಾಗಿದೆ.