ಸಂಜೆ ವಾಣಿ ವಾರ್ತೆ
ಕೊಟ್ಟೂರು, ಜೂ.15: ಇಂದು ಕಾಲೇಜ್ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ.
ರಾಷ್ಟ್ರಮಟ್ಟದಲ್ಲಿ ನ್ಯಾಷನಲ್ ಟೆಸ್ಟ್ ಏಜೆನ್ಸಿ ನಡೆಸುವ ನೀಟ್ ಪರೀಕ್ಷೆಗೆ ಈ ಬಾರಿ 20 ಲಕ್ಷಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಹಾಜರಾಗಿದ್ದು, ಕೊಟ್ಟೂರಿನ ಇಂದು ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ಈ ಪರೀಕ್ಷೆಯಲ್ಲಿ ಇಂದು ಕಾಲೇಜಿನ ವಿದ್ಯಾರ್ಥಿ ನಿಶಾಂಕ್ 720ಕ್ಕೆ616 ಅಂಕಗಳನ್ನು ಪಡೆದು ರಾಜ್ಯದ ಗಮನ ಸೆಳೆದಿದ್ದಾನೆ. ಇನ್ನುಳಿದ ಅದೇ ಕಾಲೇಜಿನ ವಿದ್ಯಾರ್ಥಿಗಳಾದ ಅವಿನಾಶ್ 458, ಹರೀಶ್ 456, ಎನ್ ಪೂಜಾ 433, ಜೆಕೆ ದರ್ಶನ್ 409, ರಾಕೇಶ್ 379 ಅಂಕಗಳನ್ನು ಪಡೆದು ಸರ್ಕಾರಿ ಮೆಡಿಕಲ್ ಸೀಟು ಪಡೆಯುವ ಭರವಸೆ ಮೂಡಿಸಿದ್ದಾರೆ ಎಂದು ಪ್ರಾಂಶುಪಾಲರಾದ ವೀರಭದ್ರಪ್ಪ ಹರ್ಷ ವ್ಯಕ್ತಪಡಿಸಿದರು