ನೀಟ್ ಪರೀಕ್ಷೆ ತನಿಖೆ ಪ್ರಿಯಾಂಕಾ ಆಗ್ರಹ

ನವದೆಹಲಿ,ಜೂ.೭- ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಹಲವು ಅಭ್ಯರ್ಥಿಗಳು ದೂರು ನೀಡಿದ್ದು, ಈ ದೂರುಗಳ ಬಗ್ಗೆ ತನಿಖೆಯಾಗಬೇಕು ಎಂದಿದ್ದಾರೆ. ನೀಟ್ ಪರೀಕ್ಷೆಯ ಫಲಿತಾಂಶಗಳ ಬಗ್ಗೆ ಸಂಬಂಧಿಸಿದ ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರಗಳನ್ನು ಬಯಸುತ್ತಾರೆ ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಅಭ್ಯರ್ಥಿಗಳು ನಿರಂತರವಾಗಿ ದೂರು ನೀಡುತ್ತಿದ್ದರೂ ಅವರ ದೂರು, ಪ್ರಶ್ನೆಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದಿದ್ದಾರೆ ವಿದ್ಯಾರ್ಥಿಗಳ ದೂರುಗಳು ಮಾನ್ಯವಾಗಿದ್ದು, ಅವರ ದೂರುಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಫಲಿತಾಂಶವು ಬಿಡುಗಡೆಯಾದಾಗಿನಿಂದಲೂ ಸುದ್ದಿಯಲ್ಲಿದೆ. ಈ ವರ್ಷ ಸುಮಾರು ೨೪ ಲಕ್ಷ ಅಭ್ಯರ್ಥಿಗಳು ನೀಟ್‌ಗೆ ಹಾಜರಾಗಿದ್ದರು. ಆದರೆ ಅವರೇ ಈ ಪರೀಕ್ಷೆಯ ಕುರಿತು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಶುಕ್ರವಾರ ಈ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಪರೀಕ್ಷೆಗಳಿಗೆ ಸಂಬಂಧಿಸಿದ ಅಕ್ರಮಗಳ ಬಗ್ಗೆ ಅವರು ಮೋದಿ ಸರ್ಕಾರ ಚಕಾರವೆತ್ತುತ್ತಿಲ್ಲ ಎಂದಿದ್ದಾರೆ.
ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಭ್ಯರ್ಥಿಗಳು ಅಂಕಗಳನ್ನು ಹೆಚ್ಚಿಸಲಾಗಿದೆ ಎಂದು ಆರೋಪಿಸಿದ್ದಾರೆ. ಹಲವು ಅಭ್ಯರ್ಥಿಗಳ ಅಂಕ ಹೆಚ್ಚಳದಿಂದಾಗಿ ದಾಖಲೆಯ ೬೭ ಅಭ್ಯರ್ಥಿಗಳು ಅಗ್ರಸ್ಥಾನ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಮೊದಲ ಬಾರಿಗೆ ಪ್ರಶ್ನೆಗಳನ್ನು ಎತ್ತುತ್ತಿದ್ದೇನೆ ಎಂದು ಪ್ರಿಯಾಂಕಾ ಗಾಂಧಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಒಂದೇ ಪರೀಕ್ಷಾ ಕೇಂದ್ರದ ಆರು ಅಭ್ಯರ್ಥಿಗಳು ೭೨೦ ರಲ್ಲಿ ೭೨೦ ಅಂಕಗಳನ್ನು ಪಡೆಯುವ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಇದರ ಮೇಲೆ ಅಭ್ಯರ್ಥಿಗಳು ಅಕ್ರಮಗಳ ಆರೋಪ ಮಾಡಿದ್ದಾರೆ. ಫಲಿತಾಂಶ ಪ್ರಕಟವಾದ ಬಳಿಕ ಹಲವು ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿರುವ ಹಲವು ವರದಿಗಳಿವೆ ಎಂದು ಬರೆದುಕೊಂಡಿದ್ದಾರೆ. ಈ ಮಾಹಿತಿಯು ತುಂಬಾ ದುಃಖಕರ ಮತ್ತು ಆಘಾತಕಾರಿಯಾಗಿದೆ. ಸರಕಾರವನ್ನು ಪ್ರಶ್ನಿಸಿದ ಅವರು, ಲಕ್ಷಾಂತರ ವಿದ್ಯಾರ್ಥಿಗಳ ದನಿಯನ್ನು ಸರಕಾರ ಏಕೆ ಕಡೆಗಣಿಸುತ್ತಿದೆ. ವಿದ್ಯಾರ್ಥಿ ಪರೀಕ್ಷೆಗಳಲ್ಲಿ ಎದ್ದಿರುವ ಪ್ರಶ್ನೆಗಳಿಗೆ ಉತ್ತರ ಬೇಕೇ.
ವಿದ್ಯಾರ್ಥಿಗಳ ದೂರುಗಳ ಬಗ್ಗೆ ತನಿಖೆ ನಡೆಸಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿಯೂ ಸರ್ಕಾರದ ಮೇಲಲ್ಲವೇ ವಿದ್ಯಾರ್ಥಿಗಳ ಆರೋಪದ ನಂತರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಯಾವುದೇ ಅಕ್ರಮಗಳನ್ನು ನಿರಾಕರಿಸಿದೆ .ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಮಾಡಲಾದ ಬದಲಾವಣೆಗಳು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಕಳೆದುಹೋದ ಸಮಯವನ್ನು ಸರಿದೂಗಿಸಲು ಕೃಂಪಾಕದಿಂದ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಗಳಿಸಲು ಕೆಲವು ಕಾರಣಗಳಾಗಿವೆ ಎಂದು ಅವರು ಹೇಳಿದ್ದಾರೆ.