ಜಗಳೂರು.ಏ.೧೧ :- ವಿಧಾನಸಭಾ ಕ್ಷೇತ್ರದ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಎಲ್ಲ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಶಾಂತಿಯುತ ಪಾರದರ್ಶಕ ಚುನಾವಣೆ ನಡೆಸಲು ಸಹಕರಿಸಬೇಕು ಎಂದು ಚುನಾವಣಾಧಿಕಾರಿ ಎಸ್ ರವಿ ಸೂಚನೆ ನೀಡಿದರು.ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದ ಚುನಾವಣಾ ಅಧಿಕಾರಿಗಳ ಕಚೇರಿಯಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ದರು.ಏ. 13ರಂದು ಅಧಿ ಸೂಚನೆ ಜಾರಿಗೊಂಡು ಅಂದಿನಿಂದಲೇ ನಾಮಪತ್ರ ಸ್ವೀಕರಿಸುವ ಕಾರ್ಯ ನಡೆಯಲಿದೆ ಈ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಸಲ್ಲಿಸಬೇಕಾದ ದಾಖಲೆಗಳ ಬಗ್ಗೆ ಹಾಗೂ ಪಾಲಿಸಬೇಕಾದ ನೀತಿ ನಿಯಮಗಳ ಬಗ್ಗೆ ಪಕ್ಷಗಳ ಮುಖಂಡರಿಗೆ ಮಾಹಿತಿ ನೀಡಿದರು.ಅಭ್ಯರ್ಥಿಗಳು ಪ್ರತಿದಿನದ ಲೆಕ್ಕವನ್ನು ಸರಿಯಾಗಿ ನಿರ್ವಹಿಸಬೇಕು ಅಗತ್ಯ ಮಾಹಿತಿಯನ್ನು ಕಚೇರಿಯಲ್ಲಿರುವ ವೆಚ್ಚವೀಕ್ಷಕರ ಮಾರ್ಗ ದರ್ಶನ ಪಡೆದುಕೊಳ್ಳಬೇಕು,₹ 40 ಲಕ್ಷ ಮೀರದಂತೆ ಖರ್ಚು ಮಾಡಬೇಕು ಹಾಗೂ ಕಡ್ಡಾಯವಾಗಿ ಚೆಕ್ ಮತ್ತು ಆನ್ಲೈನ್ ಮೂಲಕ ಪಾವತಿಸಬೇಕು ಎಂದು ಸಲಹೆ ನೀಡಿದರು.