ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಸೂಚನೆ

ಕೆ.ಆರ್.ಪುರ, ಜು.೨೫- ಮಹದೇವಪುರ ಕ್ಷೇತ್ರದ ಬಿದರಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ನೆಲಮಟ್ಟದ ನೀರಿನ ಟ್ಯಾಂಕ್ ನಿರ್ಮಾಣ ಮಾಡುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಪಂಚಾಯತಿ ಅಧ್ಯಕ್ಷ ಬಿ.ವಿ.ವರುಣ್ ಸೂಚನೆ ನೀಡಿದರು.
ಬಿದರಹಳ್ಳಿಯ ಗ್ರಾಮ ಪಂಚಾಯತಿಯ ಮೊದಲನೇ ಸುತ್ತಿನ ವಾರ್ಡ್‌ನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನೂತನ ಟ್ಯಾಂಕ್‌ಗಳ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದರು.
ಪಂಚಾಯತಿ ಮಾಜಿ ಉಪಾಧ್ಯಕ್ಷ ಬಿ.ಜಿ.ರಾಜೇಶ್ ಮಾತನಾಡಿ ಗ್ರಾಮದ ಅಭಿವೃದ್ಧಿ ಹಾಗೂ ಸಮಸ್ಯೆಗಳ ಪರಿಹಾರ ಮಾಡುವ ನಿಟ್ಟಿನಲ್ಲಿ ಸಭೆಗಳು ಹೆಚ್ಚು ಮುಖ್ಯವಾಗಿದ್ದು ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಮನವಿಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದರು. ರಸ್ತೆ ಹಾಗೂ ಚರಂಡಿಗಳ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಪಂಚಾಯತಿ ಸದಸ್ಯರು ಹಾಗೂ ಅಧಿಕಾರಿಗಳು ಶ್ರಮವಹಿಸುಮತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪಿಡಿಓ ಲೋಹಿತ್,ಕಾರ್ಯದರ್ಶಿ ಮುನಿರಾಜು, ಮುಖಂಡರಾದ ಸುನೀಲ್, ಮತ್ತಿತರರು ಇದ್ದರು.