ಚಿತ್ತಾಪುರ:ಜು.16:ಮಳೆಗಾಲ ಈಗಾಗಲೇ ಪ್ರಾರಂಭವಾಗಿದ್ದು ಸಾರ್ವಜನಿಕರು ಕಡ್ಡಾಯವಾಗಿ ಕುದಿಸಿ ಆರಿಸಿದ ನೀರನ್ನೇ ಕುಡಿಯುವಂತೆ ವಾಡಿ ಪುರಸಭೆ ಮುಖ್ಯಾಧಿಕಾರಿ ಸಿ.ಫಕ್ರೂದ್ಧಿನ್ ಪ್ರಕಟಣೆ ಹೊರಡಿಸಿದ್ದಾರೆ.
ಈ ಕುರಿತು ಸಲಹೆ ನೀಡಿದ ಅವರು,ಭೀಮಾ ನದಿಗೆ ಹೊಸ ನೀರು ಹರಿದು ಬರುವುದರಿಂದ ಹಾಗೂ ಮಳೆಗಾಲದ ನೀರು ಸಂಗ್ರಹ ಗೊಳ್ಳುವುದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಈ ಸಂದರ್ಭದಲ್ಲಿ ಕ್ರಿಮಿ ಕೀಟಗಳು ನೀರಿನಲ್ಲಿ ಹೆಚ್ಚಾಗಿ ಬೆಳೆಯುತ್ತವೆ. ಸಾರ್ವಜನಿಕರು ಸಾಂಕ್ರಾಮಿಕ ರೋಗ ನಿಯಂತ್ರಣದ ಉದ್ದೇಶದಿಂದ ಕಡ್ಡಾಯವಾಗಿ ಕುಡಿಯುವ ನೀರು ಕುದಿಸಿ ಆರಿಸಿದ ನೀರನ್ನೇ ಬಳಸಬೇಕು. ಇದರಿಂದ ಸಾಂಕ್ರಾಮಿಕ ರೋಗ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.