ನೀವು ಒಂದು ಮತ ಹಾಕದಿದ್ದರೆ ಬಿಜೆಪಿಗೆ ಎರಡು ಮತ ಲಾಭ ಆದಂತೆ: ಜಮೀರ್

ಬಳ್ಳಾರಿ : ಮತಗಟ್ಟೆಗೆ ಬಂದು ನೀವು ನಿಮ್ಮ ಒಂದು ಮತ ಹಾಕದಿದ್ದರೆ ಬಿಜೆಪಿಗೆ ಎರಡು ಮತ ಲಾಭ ಆದಂತೆ ಎಂದು ವಸತಿ ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ.

ಅವರು ಇಂದು ಜಿಲ್ಲೆಯ
ಸಂಡೂರಿನ ಚಪ್ಪರದ ಹಳ್ಳಿಯಲ್ಲಿ ಜಾಮಿಯಾ ಮಸೀದಿ ವತಿಯಿಂದ ನಿರ್ಮಿಸಲಾಗುತ್ತಿರುವ ಶಾದಿ ಮಹಲ್ ಕಾಮಗಾರಿ ವೀಕ್ಷಿಸಿದ ನಂತರ ಸಮುದಾಯದ ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಆರು ತಿಂಗಳ ಮುಂಚೆಯೇ ಲೋಕಸಭೆ ಚುನಾವಣಾ ಪ್ರಚಾರ ಆರಂಭಿಸಿದಂತೆ ಲೋಕಸಭೆ ಚುನಾವಣೆಯಲ್ಲಿ ಅಲ್ಪಸಂಖ್ಯಾತ ಸಮುದಾಯ ಶೇ.100 ರಷ್ಟು ಕಾಂಗ್ರೆಸ್ ಪರ ನಿಲ್ಲಬೇಕು. ಮತದಾನ ಮಾಡಲು ಅಲಕ್ಷ್ಯ ಬೇಡ. ನೀವು ಒಂದು ಮತ ಹಾಕದಿದ್ದರೆ ಬಿಜೆಪಿಗೆ ಎರಡು ಮತ ಲಾಭ ಆದಂತೆ. ದೇಶದ ಹಿತಾಸಕ್ತಿಗಾಗಿ ಇಡೀ ಸಮುದಾಯ ಕಾಂಗ್ರೆಸ್ ಬೆಂಬಲಿಸಬೇಕು. ಮುಂದಿನ ಲೋಕಸಭೆ ಚುನಾವಣೆ ಅತ್ಯಂತ ಮಹತ್ವ ದ್ದಾಗಿದ್ದು ವಿಧಾನಸಭೆ ಚುನಾವಣೆ ರೀತಿಯಲ್ಲೇ ಲೋಕಸಭೆ ಚುನಾವಣೆ ಯಲ್ಲೂ ಅಲ್ಪಸಂಖ್ಯಾತ ಸಮುದಾಯ ಕಾಂಗ್ರೆಸ್ ಪರ ನಿಲ್ಲಬೇಕು.

ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಬಂದರೆ ಮಾತ್ರ ದೇಶದಲ್ಲಿ ನೆಮ್ಮದಿ ಸಾಧ್ಯ. ದೇಶದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸಿದಾಗಲೆಲ್ಲ ಜನಪರ ಅಭಿವೃದ್ಧಿ ಯೋಜನೆ ರೂಪಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದು ಗ್ಯಾರಂಟಿ ಯೋಜನೆ ಜಾರಿಗೂಳಿಸಿದ್ದು, ಕೋಟ್ಯಂತರ ಕುಟುಂಬ ಗಳು ನೆರವು ಪಡೆದಿವೆ ಎಂದು ಹೇಳಿದರು.
ಜಾಮಿಯಾ ಮಸೀದಿ ವತಿಯಿಂದ ನಿರ್ಮಿಸಲಾಗುತ್ತಿರುವ ಶಾದಿ ಮಹಲ್ ಕಾಮಗಾರಿ ಶೀಘ್ರ ಪೂರ್ಣ ಗೊಳಿಸಲು ಎರಡು ಹಂತದಲ್ಲಿ ತಲಾ 50 ಲಕ್ಷ ನೆರವು ಬಿಡುಗಡೆ ಮಾಡಲಾಗುವುದು. 11 ಮಸೀದಿಗಳ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿದರೆ ಅಗತ್ಯ ಅರ್ಥಿಕ ನೆರವು ವಖ್ಫ್ ಬೋರ್ಡ್ ನಿಂದ ನೀಡಲಾಗುವುದು ಎಂದು ಹೇಳಿದರು.
ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಲಯ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ ವತಿಯಿಂದ ಶಿಕ್ಷಣ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಹಲವಾರು ಯೋಜನೆಗಳಿದ್ದು ಸಮುದಾಯ ಅದರ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.

ಶಾಸಕ ತುಕಾರಾಂ, ಮಸೀದಿ ಮುಖ್ಯಸ್ಥರು ಉಪಸ್ಥಿತರಿದ್ದರು.