
ಬೀದರ್: ಜು.8:ಬಜೆಟ್‍ನಲ್ಲಿ ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿಗಳಿಗೆ ಅನುದಾನ ಮೀಸಲಿಡುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಶಂಕರರಾವ್ ದೊಡ್ಡಿ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‍ನಲ್ಲಿ ಶಕ್ತಿ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿದ್ದಾರೆ. ಇನ್ನೊಂದು ಗ್ಯಾರಂಟಿಯನ್ನೂ ಈಡೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಬಜೆಟ್‍ನಲ್ಲಿ ಶಿಕ್ಷಣ, ಆರೋಗ್ಯ ಸೇರಿ ಎಲ್ಲ ಕ್ಷೇತ್ರಗಳಿಗೆ ಪ್ರಾಶಸ್ತ್ಯ ಕೊಡಲಾಗಿದೆ. ಎಲ್ಲರಿಗೂ ಸಾಮಾಜಿಕ ನ್ಯಾಯ ಕಲ್ಪಿಸಲಾಗಿದೆ. ಬಡವರಿಗೆ ಆಸರೆ ಹಾಗೂ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಉತ್ತಮ ಬಜೆಟ್ ಇದಾಗಿದೆ ಎಂದು ಹೇಳಿದ್ದಾರೆ.