ನೂತನ ಅಧ್ಯಕ್ಷರ ಆಯ್ಕೆ

ಚನ್ನಮ್ಮನ ಕಿತ್ತೂರ,ಜ20: ಕಿತ್ತೂರ ರಾಣಿ ಚನ್ನಮ್ಮ ಬಾಲಕಿಯರ ವಸತಿ ಸೈನಿಕ ಶಾಲೆಗೆ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಬಿ. ಇನಾಮದಾರ ಹಾಗೂ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಸದಸ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾಗಿ ಮಾತನಾಡಿದ ಇನಾಮದಾರವರು ಆಡಳಿತ ಮಂಡಳಿಯನ್ನು ಒಗ್ಗೂಡಿಸಿಕೊಂಡು ಈ ಶಾಲೆಯನ್ನು ಇನ್ನೂ ಎತ್ತರ ಮಟ್ಟಕ್ಕೆ ಒಯ್ಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಯಾವುದೇ ತಪ್ಪಾಗಿದ್ದರೆ. ಅವುಗಳನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಕ್ರೀಡೆ ಸೇರಿದಂತೆ ಇನ್ನೂ ಅನೇಕ ಚಟುವಟಿಕೆಗಳಿಗೆ ಆದ್ಯತೆ ನೀಡುವದರೊಂದಿಗೆ ಉತ್ತಮ ಶಿಕ್ಷಣವಂತರನ್ನಾಗಿ ಮಾಡಲು ಪ್ರಯತ್ನಿಸುತ್ತೇವೆ. ಸೈನ್ಯಕ್ಕೆ ಸೇರುವವರಿಗೆ ವಿಶೇಷ ತರಬೇತಿ ಕೊಡಿಸಲಾಗುವದೆಂದು ಹೇಳಿದರು.
ಈ ವೇಳೆ ಮುಖ್ಯ ಶಿಕ್ಷಕ ಆರ್.ಎಸ್. ಕತ್ರಿ, ಗಣ್ಯರು, ಸಿಬ್ಬಂದಿ, ಸಾರ್ವಜನಿಕರಿದ್ದರು.