ನೂತನ ಅಬಕಾರಿ ನೀತಿ ವಾಪಸ್ ಪಡೆದ ದೆಹಲಿ ಸರ್ಕಾರ

ನವದೆಹಲಿ, ಜು. ೩೦- ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿ ಸರ್ಕಾರ ಹೊಸ ಅಬಕಾರಿ ನೀತಿ ಹಿಂಪಡೆಯಲು ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.
ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರಿ ಮಾರಾಟ ಮಳಿಗೆಗಳ ಮೂಲಕ ಮದ್ಯ ಮಾರಾಟಕ್ಕೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಗುಜರಾತ್‌ನಲ್ಲಿ ಅಕ್ರಮ ಮದ್ಯ ವಹಿವಾಟು ನಡೆಯುತ್ತಿದೆ. ಈಗ ದೆಹಲಿಯಲ್ಲೂ ಮುಂದುವರಿಸಲು ಬಯಸಿದ್ದಾರೆ ಎಂದು ಬಿಜೆಪಿಯನ್ನು ಗುರಿಯಾಗಿರಿಸಿಕೊಂಡು ಉಪಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.
ಸರ್ಕಾರಿ ಮದ್ಯದಂಗಡಿಗಳ ಮೂಲಕ ಮದ್ಯ ಮಾರಾಟವಾಗುವುದನ್ನು ಖಾತ್ರಿಪಡಿಸಿಕೊಳ್ಳಲು ದೆಹಲಿ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದ್ದು ಈ ವಿಚಾರದಲ್ಲಿ ಗೊಂದಲವಿಲ್ಲ ಎಂದು ಹೇಳಿದರು.
ಮದ್ಯದ ಪರವಾನಿಗಿ ನೀಡುವ ಅಧಿಕಾರಿಗಳಿಗೆ ಬೆದರಿಕೆ ಹಾಕಲು ಬಿಜೆಪಿ ಸಿಬಿಐ ಮತ್ತು ಜಾರಿನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅನೇಕರು ಈಗ ಅಂಗಡಿಗಳನ್ನು ಮುಚ್ಚಿ ಚಿಲ್ಲರೆ ಪರವಾನಿಗಿಗಳ ಬಹಿರಂಗ ಹರಾಜನ್ನು ಪ್ರಾರಂಭಿಸಲು ಅಬಕಾರಿ ಅಧಿಕಾರಿಗಳು ಎದುರುತ್ತಿದ್ದಾರೆ ಎಂದು ಆರೋಪಿಸಿದರು.