ನೂತನ ಕುಲಸಚಿವರಾಗಿ ಪ್ರೊ.ಬಿ.ಎಸ್.ನಾವಿ ಅಧಿಕಾರ ಸ್ವೀಕಾರ

ವಿಜಯಪುರ, ಜು.30-ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ.ಬಿ.ಎಸ್.ನಾವಿ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡರು.
ಪ್ರಭಾರ ಕುಲಸಚಿವರಾಗಿದ್ದ ಮೌಲ್ಯಮಾಪನ ಕುಲಸಚಿವ ಪ್ರೊ.ರಮೇಶ್.ಕೆ ಅವರು ಪ್ರೊ.ನಾವಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಆರ್ಥಿಕ ಅಧಿಕಾರಿ ಪ್ರೊ.ಎಸ್.ಬಿ.ಕಾಮಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.