ನೂತನ ಗ್ರಾಮ. ಪಂ ಸದಸ್ಯರಿಗೆ ಅಭಿನಂದನೆ

ಆಳಂದ:ಜ.4: ತಾಲೂಕಿನಲ್ಲಿ ಜರುಗಿದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಜಯ ಸಾಧಿಸಿರುವ ಅಭ್ಯರ್ಥಿಗಳಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ, ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಅಭಿನಂದನೆ ತಿಳಿಸಿದ್ದಾರೆ.

ಗ್ರಾಮ ಸ್ವರಾಜ್ಯದ ಆಶಯದಂತೆ ನೂತನ ಸದಸ್ಯರು ಕಾರ್ಯ ನಿರ್ವಹಿಸಲಿ ಜೊತೆಗೆ ವಾರ್ಡ ಸೇರಿದಂತೆ ಸಂಪೂರ್ಣ ಗ್ರಾಮದ ಅಭಿವೃದ್ಧಿಗೆ ಬದ್ಧರಾಗಿ ಕರ್ತವ್ಯ ಕೈಗೊಳ್ಳಲಿ ಎಂದು ಹಾರೈಸಿದ್ದಾರೆ.

ಚುನಾವಣೆ ಜರುಗಿದ 30 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು 11 ಗ್ರಾಮ ಪಂಚಾಯತಗಳಲ್ಲಿ ನಿಚ್ಚಳ ಬಹುಮತ ಪಡೆದಿದ್ದಾರೆ. ಇನ್ನೂ 10 ಗ್ರಾಮ ಪಂಚಾಯತಿಗಳಲ್ಲಿ ನಮ್ಮ ಪಕ್ಷದ ಬಂಡಾಯ ಅಭ್ಯರ್ಥಿಗಳೇ ನಿರ್ಣಾಯಕರಾಗಿ ಗೆಲುವು ಸಾಧಿಸಿದ್ದಾರೆ. ಸ್ವತ: ಅಭ್ಯರ್ಥಿಗಳೇ ಬಂದು ನಮ್ಮನ್ನು ಸಂಪರ್ಕಿಸಿ ತಾವು ನಿಮ್ಮೊಡನೆ ಇದ್ದೇವೆ ಎಂದು ತಿಳಿಸಿದ್ದಾರೆ ಹೀಗಾಗಿ ಉಳಿದ 10 ಗ್ರಾಮ ಪಂಚಾಯತಿಗಳಲ್ಲಿಯೂ ಬಿಜೆಪಿ ಪಕ್ಷದ ಬೆಂಬಲಿತರೇ ಅಧಿಕಾರಕ್ಕೆ ಬರಲಿದ್ದಾರೆ ಎಂದು ಹೇಳಿದ್ದಾರೆ.

ತಾಲೂಕಿನಲ್ಲಿ ಬಿಜೆಪಿ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದು ಇದು ಆಶಾದಾಯಕ ಬೆಳವಣಿಗೆಯಾಗಿದೆ. ಕಳೆದ ಬಾರಿಯ ಚುನಾವಣೆಯಲ್ಲಿಯೂ ತಾಲೂಕಿನಲ್ಲಿ ಬಿಜೆಪಿ ಬೆಂಬಲಿತರೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದರು. ಗ್ರಾಮ ಸರ್ಕಾರದಿಂದ ಕೇಂದ್ರ ಸರ್ಕಾರದವರೆಗೆ ಬಿಜೆಪಿಯೇ ಅಧಿಕಾರದಲ್ಲಿದೆ. ಭಾರತೀಯ ಜನತಾ ಪಕ್ಷದ ಮೇಲೆ ವಿಶ್ವಾಸವಿಟ್ಟಿರುವ ತಾಲೂಕಿನ ಜನತೆಗೆ ಆಭಾರಿಯಾಗಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.