ನೂತನ ಡಿಡಿಪಿಐ- ಬಿಇಒ ಸ್ವಾಗತಿದ ಶಿಕ್ಷಕರು

ಕೋಲಾರ,ನ.೧೭: ಸಾರ್ವಜನಿಕ ಶಿಕ್ಷಣ ಇಲಾಖೆ ನೂತನ ಉಪನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ರೇವಣಸಿದ್ದಪ್ಪ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ವೆಂಕಟರಾಮರೆಡ್ಡಿ ಅವರನ್ನು ಜಿಲ್ಲಾ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದಿಂದ ಆತ್ಮೀಯವಾಗಿ ಸನ್ಮಾನಿಸಿ ಸ್ವಾಗತಿಸಲಾಯಿತು.
ಸಂಗದ ಅಧ್ಯಕ್ಷ ರುದ್ರಪ್ಪ ಮಾತನಾಡಿ, ಜಿಲ್ಲೆಯ ಶೈಕ್ಷಣಿಕ ಅಭಿವೃದ್ದಿಗೆ ತಮ್ಮ ಮಾರ್ಗದರ್ಶನದಲ್ಲಿ ನಾವು ನಡೆಯಲಿದ್ದು, ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಗೆ ಹೊಸ ಆಯಾಮ ಸಿಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ರಾಮಕೃಷ್ಣಪ್ಪ, ಮುಖ್ಯಶಿಕ್ಷಕರ ಜಿಲ್ಲಾ ಸಂಘದ ಕಾರ್ಯಾಧ್ಯಕ್ಷ ಶಂಕರೇಗೌಡ, ಕಾರ್ಯದರ್ಶಿ ರವಿ, ತಾಲ್ಲೂಕು ಸಂಘದ ಅಧ್ಯಕ್ಷ ದಾಸಪ್ಪ, ಉಪಾಧ್ಯಕ್ಷೆ ಗಾಯಿತ್ರಮ್ಮ, ಖಜಾಂಚಿ ವಿಜಯಾನಂದ, ಮಹದೇವ ನಾಯಕ್ ಮುಂತಾದವರು ಹಾಜರಿದ್ದರು.