
ಹುಳಿಯಾರು, ಆ. ೮- ತುಮಕೂರು ದಕ್ಷಿಣ ಜಿಲ್ಲೆಯ ಶಿಕ್ಷಣ ಇಲಾಖೆಗೆ ನೂತನವಾಗಿ ಉಪನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿರುವ ಸಿ.ರಂಗಧಾಮಯ್ಯ ನವರಿಗೆ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ಶಿಕ್ಷಕರ ಸಂಘದ ವತಿಯಿಂದ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ವೇಳಾಪಟ್ಟಿ ಪರಿಷ್ಕರಣೆ ಮಾಡುವ ಬಗ್ಗೆ ಬಿಎಲ್‌ಓ ಕೆಲಸದಿಂದ ಶಿಕ್ಷಕರನ್ನು ಕೈ ಬಿಡುವ ಬಗ್ಗೆ ಮತ್ತು ಸಹ ಶಿಕ್ಷಕರಿಂದ ಮುಖ್ಯ ಶಿಕ್ಷಕರಾಗಿ ಬಡ್ತಿ ಕೊಡುವ ವಿಷಯದ ಬಗ್ಗೆ ಹಾಗೂ ಇನ್ನೂ ಅನೇಕ ಶಿಕ್ಷಕರ ಸಮಸ್ಯೆಗಳ ಬಗ್ಗೆ ನೂತನ ಉಪನಿರ್ದೇಶಕರ ಸಮ್ಮುಖದಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಪರಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಚಿಕ್ಕಣ್ಣ, ಉಪಾಧ್ಯಕ್ಷ ಕೆ.ಜಿ.ಕಾಳೇಗೌಡ, ಸಹ ಕಾರ್ಯದರ್ಶಿ ಜಯಲಕ್ಷ್ಮಮ್ಮ, ಜಿಲ್ಲಾ ಸಂಘದ ಮಂಜುಳಾ, ತುಮಕೂರು ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಕಾರ್ಯದರ್ಶಿ ಮಹದೇವಯ್ಯ, ಕುಣಿಗಲ್ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಮಯ್ಯ, ತಿಪಟೂರು ತಾಲ್ಲೂಕು ಸಂಘದ ಅಧ್ಯಕ್ಷ ಜಯರಾಮಯ್ಯ, ತಾಲ್ಲೂಕು ಸಂಘದ ಕಾರ್ಯದರ್ಶಿ ಪಟ್ಟಾಭಿ, ಚಿಕ್ಕನಾಯಕನಹಳ್ಳಿ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಪಲ್ಲಕ್ಕಿ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.