ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ

ಬೆಂಗಳೂರು.ನ.೮- ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಅನಂತರಾಮನಾಥ ಹೆಗಡೆ, ಸಿದ್ದಯ್ಯ ರಾಚಯ್ಯ ಹಾಗೂ ಶ್ರ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಇವರುಗಳು ಅಧಿಕಾರ ಪದವಿಯ ಪ್ರಮಾಣ ವಚನ ಸ್ವೀಕರಿಸಿದರು.
ಇಂದು ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ ಬೋಧಿಸಿದರು
ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಎಸ್ ಬೊಮ್ಮಾಯಿ, ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಿತು ರಾಜ್
ಅವಸ್ಥಿ, ಕರ್ನಾಟಕದ ಮುಖ್ಯಕಾರ್ಯದರ್ಶಿ ಪಿ. ರವಿಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.