ನೂತನ ನ್ಯಾ.ಮೂರ್ತಿಗಳ ಪ್ರಮಾಣ ವಚನ

ನವದೆಹಲಿ,ಜು.೧೪-ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹಾಗೂ ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್ ವಿ ಭಟ್ಟಿ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರು ಇಬ್ಬರಿಗೂ ಪ್ರಮಾಣ ವಚನ ಬೋಧಿಸಿದರು.
ಈ ಇಬ್ಬರಿಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಜುಲೈ ೫ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.
ಮೂವತ್ನಾಲ್ಕು ನ್ಯಾಯಮೂರ್ತಿಗಳ ಸಂಖ್ಯಾಬಲದ ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತುತ ೩೦ ನ್ಯಾಯಮೂರ್ತಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಇಬ್ಬರು ನ್ಯಾಯಮೂರ್ತಿಗಳ ನೇಮಕಾತಿಯಿಂದಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ ೩೨ಕ್ಕೆ ಏರಿಕೆಯಾದಂತಾಗುತ್ತದೆ.
ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಆಗಿರುವ ಭುಯಾನ್ ಅವರು ಆಗಸ್ಟ್ ೨, ೨೦೨೯ ರವರೆಗೆ ಮುಂದುವರಿಯಲಿದ್ದು ಮತ್ತು ನ್ಯಾಯಮೂರ್ತಿ ಭಟ್ಟಿ ಮೇ ೬, ೨೦೨೭ ರವರೆಗೆ ಅವಧಿಯ ವರೆಗೆ ಮುಂದುವರಿಯಲಿದ್ದಾರೆ.