ನೂತನ ವಸತಿ ಕಟ್ಟಡ ಉದ್ಘಾಟನೆ- ದದ್ದಲ್

ರಾಯಚೂರು.ಆ.೬- ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ಚಂದ್ರಬಂಡಾ ಗ್ರಾಮದಲ್ಲಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೇಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟನೆ ನೆರೆವೇರಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ, ಹೆಣ್ಣು ಮಕ್ಕಳು, ಮತ್ತು ಗಂಡು ಮಕ್ಕಳು ೭ ರಿಂದ ೧೦ ನೇ ತರಗತಿಯ ವರೆಗೆ ಮಾತ್ರ ಶಿಕ್ಷಣವನ್ನು ಪಡೆದುಕೊಂಡು ಮುಂದೆ ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ಪಡೆಯದೇ ವಂಚಿತರಾಗಬಾರದು ಗ್ರಾಮೀಣ ಪ್ರದೇಶಗಳಲ್ಲಿ ಶೇ.೧೦೦ ರಷ್ಟು ಶಿಕ್ಷಣ ಪಡೆದಾಗ ಮಾತ್ರ ಜಿಲ್ಲೆ ರಾಜ್ಯ ಮತ್ತು ದೇಶ ಅಭಿವೃದ್ಧಿಯಾಗಲು ಸಾಧ್ಯ ಎಂದರು. ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ, ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಯೊಂದು ಹೋಬಳಿಗೆ ಒಂದು ವಸತಿ ಶಾಲೆ ಸ್ಥಾಪನೆ ಮಾಡಲು ಒತ್ತು ನೀಡಿದರು. ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಒದಗಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ದೇವಸೂಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಪಂಪಾಪತಿ, ಊರಿನ ಹಿರಿಯ ಮುಖಂಡರು ಸುತ್ತಮುತ್ತಲಿನ ಹಿರಿಯ ಮುಖಂಡರು ಗ್ರಾಮ ಪಂ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು, ಹಾಗೂ ಕಾರ್ಯಕರ್ತರು ಸೇರಿದಂತೆ ಉಪಸ್ಥಿತರಿದ್ದರು.