ನೂತನ ವಿವಿಗೆ ರೂ. 100 ಕೋಟಿ: ಶಾಸಕ ರಹೀಂ ಖಾನ್ ಬೇಡಿಕೆ

ಬೀದರ್: ಸೆ.23:ರಾಜ್ಯ ಸರ್ಕಾರ ಬೀದರ್ ಜಿಲ್ಲೆಗೆ ಹೊಸದಾಗಿ ಮಂಜೂರು ಮಾಡಿರುವ ವಿಶ್ವವಿದ್ಯಾಲಯಕ್ಕೆ ರೂ. 100 ಕೋಟಿ ಅನುದಾನ ಒದಗಿಸಬೇಕು ಎಂದು ಶಾಸಕ ರಹೀಂ ಖಾನ್ ಬೇಡಿಕೆ ಮಂಡಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಬೀದರ್‍ಗೆ ನೂತನ ವಿಶ್ವವಿದ್ಯಾಲಯ ಮಂಜೂರು ಮಾಡಿರುವುದು ಸ್ವಾಗತಾರ್ಹ. ಹಿಂದುಳಿದ ಜಿಲ್ಲೆಯಾಗಿರುವ ಕಾರಣ ವಿಶ್ವವಿದ್ಯಾಲಯ ಕಾಮಗಾರಿಗಳಿಗೆ ರೂ. 100 ಕೋಟಿ ಅನುದಾನ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ನೂತನ ವಿಶ್ವವಿದ್ಯಾಲಯ ಸ್ಥಾಪನೆಯಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಶೈಕ್ಷಣಿಕ ಪ್ರಗತಿಗೂ ನೆರವಾಗಲಿದೆ ಎಂದು ಹೇಳಿದರು.