ನೂತನ ಶಾಲಾಕಟ್ಟಡ ನಿರ್ಮಾಣಕ್ಕೆ ಮನವಿ

ಕಲಬುರಗಿ,ಫೆ. 29: ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಭೀಮನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಗ್ರಾಮದ ಶಾಲೆಯ ಮಕ್ಕಳಿಗೆ ನೂತನ ಶಾಲಾ ಕಟ್ಟಡ ನಿರ್ಮಿಸಿ, ಅಲ್ಲಿಯವರೆಗೂ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಎಐಡಿಎಸ್‍ಒ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ ಹಾಗೂ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲೆಯಾದ್ಯಂತ ಇಂತಹ ಅಪಾಯಕಾರಿಯಾದ ಶಿಥಿಲಗೊಂಡ ಕಟ್ಟಡಗಳಲ್ಲೆ ಹಲವಾರು ಶಾಲೆಗಳು ನಡೆಸಲಾಗುತ್ತಿದೆ. ಕಳೆದ ಮಳೆಗಾಲದ ಸಂದರ್ಭದಲ್ಲಿ ಚಿತ್ತಾಪುರ, ಜೇವರ್ಗಿ ಮತ್ತು ಕಮಲಾಪುರ ತಾಲೂಕುಗಳಲ್ಲಿ ಮೇಲ್ಛಾವಣಿ, ಕಟ್ಟಡಗಳು ಕುಸಿದು ಬಿದ್ದಾಗ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿತ್ತು . ಆದರೂ ಸಹ ಸಂಬಂಧ ಪಟ್ಟ ಅಧಿಕಾರಿಗಳು ಇಲ್ಲಿಯವರೆಗೆ ಯಾವುದೇ ಗಮನಹರಿಸದಿರುವದು ಅತ್ಯಂತ ಶೋಚನಿಯವಾಗಿದೆ ಎಂದಿದ್ದಾರೆ.