ಕೋಲಾರ,ಜೂ,೨:ನಗರದ ತಾಲ್ಲೂಕು ಪಂಚಾಯಿತಿಯಲ್ಲಿ ಬುಧವಾರ ನಡೆದ ಕೆ.ಡಿ.ಪಿ ಸಭೆಯಲ್ಲಿ ನೂತನವಾಗಿ ಕೋಲಾರದ ವಿಧಾನಸಭಾ ಕ್ಷೇತ್ರಕ್ಕೆ ಶಾಸಕರಾಗಿ ಆಯ್ಕೆಯಾದ ಕೊತ್ತೂರು ಮಂಜುನಾಥ್ ಮತ್ತು ವಿಧಾನಪರಿಷತ್ ಸದಸ್ಯರಾದ ಅನಿಲ್ ಕುಮಾರ್ ಅವರನ್ನು ತಾಲ್ಲೂಕು ಪಂಚಾಯಿ ಕಾರ್ಯನಿರ್ವಾಹಣಾ ಅಧಿಕಾರಿ ಮುನಿಯಪ್ಪ ಹಾಗೂ ಸಿಬ್ಬಂದಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರ್ ವಾಣಿಕ್ಯರ್ ಹಾಜರಿದ್ದರು.