ನೂತನ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ್, ಪ್ರಿಯಾಂಕ ಖರ್ಗೆಗೆ ಸನ್ಮಾನ

ಭಾಲ್ಕಿ:ಮೇ.29: ರಾಜ್ಯದ ಕಾಂಗ್ರೆಸ್ ಸರಕಾರದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಕಲಬುರಗಿ ಜಿಲ್ಲೆಯ ಡಾ.ಶರಣಪ್ರಕಾಶ ಪಾಟೀಲ್ ಮತ್ತು ಪ್ರಿಯಾಂಕ ಖರ್ಗೆ ಅವರನ್ನು ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಸನ್ಮಾನಿಸಿದರು.

ಬೆಂಗಳೂರಿನಲ್ಲಿ ಭಾನುವಾರ ನೂತನ ಸಚಿವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಬಸವೇಶ್ವರ ಬ್ಯಾಂಕ್‍ನ ಅಧ್ಯಕ್ಷ ಶಶಿಧರ ಕೋಸಂಬೆ, ರವಿ ಬೋರವೆಲ್ಸ್ ಮಾಲೀಕ ರವೀಂದ್ರ ಚಿಡಗುಪ್ಪೆ, ಪ್ರಮುಖರಾದ ಮಹಾದೇವ ಬೇಲೂರೆ, ಅನಿಲ ದಾಡಗೆ, ರಾಜಕುಮಾರ ಗುಬ್ಬೆ, ಗುರುರಾಜ ಸ್ವಾಮಿ ಸೇರಿದಂತೆ ಹಲವರು ಇದ್ದರು