ನೂತನ ಸಚಿವರ ಅಭಿನಂದನಾ ಸಮಾರಂಭ ನಾಳೆ

ಬೀದರ್: ಕಾಂಗ್ರೆಸ್ ಜಿಲ್ಲಾ ಘಟಕವು ನೂತನ ಅರಣ್ಯ ಹಾಗೂ ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂಖಾನ್ ಅವರಿಗೆ ನಾಳೆ ಸಂಜೆ 5ಕ್ಕೆ ನಗರದ ಗಣೇಶ ಮೈದಾನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆ ವಹಿಸುವರು. ಪಕ್ಷದ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರು, ಮಾಜಿ ಸಂಸದರು, ವಿಧಾನ ಪರಿಷತ್ ಮಾಜಿ ಸದಸ್ಯರು, ಮಾಜಿ ಶಾಸಕರು ಹಾಗೂ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಶಹಾಪುರ ಗೇಟ್ ಬಳಿ ನೂತನ ಸಚಿವರಿಗೆ ಭವ್ಯ ಸ್ವಾಗತ ನೀಡಿ, ಬರಮಾಡಿಕೊಳ್ಳಲಾಗುವುದು. ಬಳಿಕ ಬಸವೇಶ್ವರ ವೃತ್ತದಿಂದ ನಯಾ ಕಮಾನ್, ಚೌಬಾರಾ, ಗಾವಾನ್ ಚೌಕ್, ಮುಖ್ಯರಸ್ತೆ, ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತದ ಮಾರ್ಗವಾಗಿ ಗಣೇಶ ಮೈದಾನ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಯಲಿದೆ ಎಂದು ಹೇಳಿದ್ದಾರೆ..
ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.