ನೂತನ ಸಚಿವರ ಪದಗ್ರಹಣ

ರಾಜಭವನದಲ್ಲಿ ಇಂದು ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ೨೪ ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್‌ರವರು ಪ್ರತಿಜ್ಞಾವಿಧಿ ಭೋದಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಸಭೆ ಸ್ವೀಕರ್ ಯು.ಟಿ. ಖಾದರ್‌ರವರು ಭಾಗವಹಿಸಿದ್ದರು.

ಬೆಂಗಳೂರು,ಮೇ೨೭:ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಮ್ಮ ಸಚಿವಸಂಪುಟಕ್ಕೆ೨೪ ಮಂದಿಸಚಿವರನ್ನುಸೇರ್ಪಡೆ ಮಾಡಿಕೊಳ್ಳುವ ಮೂಲಕ ಸಂಪುಟ ವಿಸ್ತರಿಸಿದ್ದು, ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ಥಿತ್ವಕ್ಕೆ ಬಂದಿದೆ.ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಿಗ್ಗೆ ನಡೆದ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಲ್ಹೋಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆಯನ್ನು ಬೋಧಿಸಿದರು.ಇಂದು ಸಚಿವರಾಗಿ ಹೆಚ್.ಕೆ ಪಾಟೀಲ್, ಕೃಷ್ಣಭೈರೇಗೌಡ, ಎನ್. ಚೆಲುವರಾಯ ಸ್ವಾಮಿ, ಕೆ. ವೆಂಟೇಶ್, ಡಾ. ಹೆಚ್.ಸಿ ಮಹದೇವಪ್ಪ,ಈಶ್ವರ ಖಂಡ್ರೆ, ಕೆ.ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣ ಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಆರ್.ಬಿ ತಿಮ್ಮಾಪುರ, ಎಸ್.ಎಸ್ ಮಲ್ಲಿಕಾರ್ಜುನ, ಶಿವರಾಜ ತಂಗಡಗಿ, ಡಾ. ಶರಣ್ ಪ್ರಕಾಶ್ ಪಾಟೀಲ್, ಮಂಕಾಳುವೈದ್ಯ, ಲಕ್ಷ್ಮಿಆರ್.ಹೆಬ್ಬಾಳ್ಕರ್, ರಹೀಂಖಾನ್, ಡಿ. ಸುಧಾಕರ್, ಸಂತೋಷ್ ಲಾಡ್, ಎನ್.ಎಸ್ ಬೋಸರಾಜು, ಭೈರತಿಸುರೇಶ್, ಮಧುಬಂಗಾರಪ್ಪ, ಡಾ. ಎಂ.ಸಿ ಸುಧಾಕರ್, ಬಿ.ನಾಗೇಂದ್ರ ಇವರುಗಳು ಪ್ರಮಾಣ ವಚನ ಸ್ವೀಕರಿಸಿದರು. ಎಲ್ಲ೨೪ ಮಂದಿ ನೂತನ ಸಚಿವರು ಸಂಪುಟ ದರ್ಜೆ ಸಚಿವರಾಗಿದ್ದಾರೆ,ಕಳೆದ ಶನಿವಾರ ಮೇ ೨೦ರಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ೨೪ ಸಚಿವರು ಪದಗ್ರಹಣದ ಮೂಲಕ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದೆ.ನೂತನ ಸಚಿವರ ಪದಗ್ರಹಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾಣಸಭಾಧ್ಯಕ್ಷ ಯು.ಟಿ ಖಾದರ್ ಸಚಿವಸಂಪುಟದ ಸದಸ್ಯರುಗಳು, ಶಾಸಕರುಗಳು, ಸಂಸದರು ಉಪಸ್ಥಿತರಿದ್ದರು.
ಜನ ಜಾತ್ರೆ
ನೂತನ ಸಚಿವರ ಪದಗ್ರಹಣ ನಡೆದ ರಾಜಭವನದ ಒಳಗೆ ಪಾಸಿದ್ದವರಿಗಷ್ಟೇ ಪ್ರವೇಶಾವಕಾಶ ನೀಡಲಾಗಿತ್ತು. ಹಾಗಾಗಿ,ರಾಜಭವನದ ಹೊರಗೆ ಜನ ಜಾತ್ರೆಯೇ ಸೇರಿದ್ದು, ಕಾಂಗ್ರೆಸ್ ಪಕ್ಷದ ಪರವಾಗಿಜೈಕಾರದ ಘೋಷಣೆಗಳು ಮುಗಿಲು ಮುಟ್ಟಿದ್ದವು. ರಾಜಭವನದ ಹೊರಗಿನ ರಸ್ತೆಯಲ್ಲಿ ಬೃಹತ್ ಎಲ್‌ಇಡಿ ಪರದೆಗಳನ್ನು ಅಳವಡಿಸಿ ಪ್ರಮಾಣವಚನ ಕಾರ್ಯಕ್ರಮ ವೀಕ್ಷಿಸಲು ಅನುಕೂಲ ಮಾಡಿಕೊಡಲಾಯಿತು. ರಾಜಭವನ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

ಶೀಘ್ರ ಖಾತೆ ಹಂಚಿಕೆ
ಸಚಿವ ಸಂಪುಟದ ಎಲ್ಲ ಸಚಿವರಿಗೆ ಇಂದು ಸಂಜೆ ಇಲ್ಲ ನಾಳೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದೇಶದ ದಿವಂಗತ ಪ್ರಧಾನಿ ಜವಹರಲಾಲ್ ನೆಹರೂರವರ ಪುಣ್ಯಸ್ಮರಣೆಯ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರಪ್ರತಿಮೆಗೆ ಪುಷ್ಪ ನನ ಸಲ್ಲಿಸಿದನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಚಿವರುಗಳಿಗೆ ಇಂದು ಸಂಜೆ ಇಲ್ಲವೇ ನಾಳೆ ಖಾತೆ ಹಂಚಿಕೆ ಮಾಡುತ್ತೇನೆ ಎಂದರು.
ಅಸಮಾಧಾನ ಇಲ್ಲ ಸಚಿವ ಸಂಪುಟದಲ್ಲಿ ಸ್ಥಾನ ಸಿಗದೇ ಇದ್ದುದಕ್ಕೆ ಯಾವಸಚಿವರು ನನ್ನ ಬಳಿ ಅಸಮಾಧಾನ ಹೊರ ಹಾಕಿಲ್ಲ. ಯಾರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಕೇಳಿ ನೋಡೋಣ ಎಂದು ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು.
ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಅವರನ್ನು ಮುಂದಿನ ದಿನಗಳಲ್ಲಿ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳೋಣ ಎಂಬ ಪ್ರಶ್ನೆಗೆ ನೋಡೋಣ ಎಂದಷ್ಟೇ ಉತ್ತರಿಸಿದರು.