ನೂತನ ಸಿಜೆ ನೇಮಕ ಕೇಂದ್ರ ಮೌನ

ನವದೆಹಲಿ, ಆ. ೨- ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಂiiಮೂರ್ತಿ ಎನ್.ವಿ. ರಮಣ ಈ ತಿಂಗಳ ೨೬ ರಂದು ನಿವೃತ್ತಿಯಾಗಲಿದ್ದಾರೆ. ಆದರೆ ಇವರ ಉತ್ತರಾಧೀಕಾರಿಯಾಗಿ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೂ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿಲ್ಲ.
ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಆಯ್ಕೆ ಮಾಡುವ ಸಂಬಂಧ ಕೇಂದ್ರ ಸರ್ಕಾರ ಒಂದು ತಿಂಗಳ ಮುಂಚಿತವಾಗಿಯೇ ಸಂಪ್ರದಾಯದಂತೆ ಶಿಫಾರಸ್ಸಿನ ಪತ್ರ ಪಡೆಯಬೇಕಾಗಿದೆ.
ಬಹುತೇಕ ಸಂದರ್ಭಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳ ನಿವೃತ್ತಿಯಾಗುವ ಒಂದು ತಿಂಗಳ ಮುಂಚಿತವಾಗಿ ನೂತನ ಮುಖ್ಯ ನ್ಯಾಯಮೂರ್ತಿಗಳ ಶಿಫಾರಸ್ಸಿನ ಪತ್ರ ಪಡೆಯಬೇಕಾಗಿದೆ.
ತಮ್ಮ ಉತ್ತರಾಧಿಕಾರಿಯಾಗಿ ಹಿರಿಯ ನ್ಯಾಯವಾದಿ ಉದಯ್ ಉಮೇಶ್ ಲಲಿತ್ ಅವರನ್ನು ಆಯ್ಕೆ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಎನ್.ವಿ. ರಮಣ ಈ ಬಗ್ಗೆ ಕೇಂದ್ರ ಕಾನೂನು ಸಚಿವಾಲಯದಿಂದ ಇದುವರೆಗೂ ಯಾವುದೇ ಪತ್ರ ಸ್ವೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜುಲೈ ೨೫ ರಂದೇ ಹೊಸ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿ ಕುರಿತಂತೆ ಕಾನೂನು ಸಚಿವಾಲಯ ರಮಣ ಅವರಿಗೆ ಪತ್ರ ಬರೆಯಲಾಗಿದೆ ಎಂಬ ಮಾಧ್ಯಮ ವರದಿಗಳು ಸಂಪೂರ್ಣ ಸುಳ್ಳು ಎಂದು ಮುಖ್ಯ ನ್ಯಾಯಮೂರ್ತಿಗಳ ಕಚೇರಿ ಸ್ಪಷ್ಟಪಡಿಸಿದೆ.