ನೂರರ ಗಡಿ ದಾಟಿದ ಪೆಟ್ರೋಲ್; ಪ್ರತಿಭಟನೆ

ದಾವಣಗೆರೆ.ಜೂ.೧೧; ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರುತ್ತಿರುವುದನ್ನು ಖಂಡಿಸಿ  ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಹದಡಿ ರಸ್ತೆಯ ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ಜಿಕ್ರಿಯಾ ಮಾತನಾಡಿ ಹಿಂದೆ ಮನಮೋಹನ್ ಸಿಂಗ್ ಸರ್ಕಾರ ಪೈಸೆ ಲೆಕ್ಕದಲ್ಲಿ ಏರಿಕೆ ಮಾಡಿದರು ಬೀದಿಗಿಳಿಯುತ್ತಿದ್ದ ಬಿಜೆಪಿ ನಾಯಕರು ಇಂದು 100 ರ ಗಡಿ ದಾಟಿದರೂ ಅದನ್ನು ಸಮರ್ಥಿಸಿಕೊಳ್ಳುವ ಮೂಲಕ ತಮ್ಮ ಅಸಮರ್ಥತೆಯನ್ನು ತೋರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬರೀ ಸುಳ್ಳು ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿಗೆ ಈ ಬೆಲೆಯೇರಿಕೆಯ ಬಿಸಿ ಮುಟ್ಟಿಸಲು ಏಕ ಕಾಲದಲ್ಲಿ ಸುಮಾರು 5000 ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಇದು ಮುಂದಿನ ದಿನಗಳಲ್ಲಿ ಇನ್ನೂ ಉಗ್ರ ಹೋರಾಟಕ್ಕೆ ಸಾಕ್ಷಿಯಾಗಲಿದೆ ಎಂದರು.
ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಬೇತುರು ಶಿವಕುಮಾರ್, ಮಾಯಕೊಂಡ ಬ್ಲಾಕ್ ಅಧ್ಯಕ್ಷರಾದ ಹಾಲೇಶ್ ಬಸನಾಳ್,ರಿಯಾಜುದ್ದೀನ್,ಮಂಜುನಾಥ್ ಕತ್ತಲಗೇರಿ ಮುಂತಾದ ರೈತ ಮುಖಂಡರು  ಭಾಗವಹಿಸಿದ್ದರು