ನೂರಾರು ಮಂದಿ ಕಾಂಗ್ರೆಸ್‌ಗೆ ಸೇರ್ಪಡೆ

ಕೆ.ಆರ್.ಪುರ,ಏ.೨೧-ರಾಜ್ಯ ಹಾಗೂ ದೇಶದಲ್ಲಿ ಕಾಂಗ್ರೆಸ್ ಪರವಾದ ವಾತವರಣವಿದ್ದು, ರಾಜ್ಯ ಸರ್ಕಾರದ ಜನಪರ ಆಡಳಿತ ಮೆಚ್ಚಿಕೊಂಡಿರುವ ನೂರಾರು ಮಂದಿ ಯುವಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮೋಹನ್ ಅವರು ತಿಳಿಸಿದರು.
ಕೆ.ಆರ್.ಪುರ ಕ್ಷೇತ್ರದ ಕಲ್ಕೆರೆ ಗ್ರಾಮಾದಲ್ಲಿ ಸೇರ್ಪಡೆ ಹಾಗೂ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಡಿ.ಕೆ. ಮೋಹನ್‌ಬಾಬು ಅವರು ಕಾಂಗ್ರೇಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬರುವವರನ್ನು ಸ್ವಾಗತಿಸುವ ಮೂಲಕ ಉತ್ತಮ ಸ್ಥಾನಮಾನವನ್ನು ನೀಡಲಾಗುವುದು ಎಂದು ಹೇಳಿದರು.
ಕೆಆರ್‌ಪುರ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ,ಹಲವು ಹಿರಿಯ ಮುಖಂಡರು ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಗೆ ಮೆಚ್ಚಿ ಪಕ್ಷ ಸೇರ್ಪಡೆಯಾಗುತ್ತಿದ್ದು, ಲೋಕಸಭಾ ಚುನಾವಣೆಗಳನ್ನು ಕೆಆರ್‌ಪುರದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಮತ ಪಡೆಯಲಿದೆ ಎಂದು ಹೇಳಿದರು.
ಕೆಆರ್‌ಪುರದಲ್ಲಿ ಮತ್ತೆ ಕಾಂಗ್ರೆಸ್ ಬಾವುಟ ಹಾರಿಸಿಸುವ ನಿಟ್ಟಿನಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಗರ ಆರ್.ಪ್ರಕಾಶ್ ಹಾಗೂ ರಾಮಮೂರ್ತಿ ಅವರ ನೇತೃತ್ವದಲ್ಲಿ ನಗರೇಶ್ವರ ನಾಗೇನಹಳ್ಳಿ ಕಾಲೋನಿಯ ಮಂಜುನಾಥ, ಮುಕುಂದ, ಆರ್. ನರಸಿಂಹ, ಮುನಿಯಪ್ಪ, ಎಂ.ನರಸಿಂಹ, ರಾಜು, ಶ್ರೀರಾಮ್ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾಜಿ ಪಾಲಿಕೆ ಸದಸ್ಯ ಕಲ್ಕೆರೆ ಶ್ರೀನಿವಾಸ್, ಭೂನ್ಯಾಯಮಂಡಳಿ ಸದಸ್ಯ ಸುನೀಲ್ ಕುಮಾರ್, ಕುಮಾರಣ್ಣ, ಅಕ್ಕಪ್ಪಣ್ಣ, ಸೋಮಣ್ಣ, ಕೃಷ್ಣಪ್ಪ, ಮನ್ಮಾಥಾ, ಮುರಳಿ, ಕಲ್ಕೆರೆ ಹಾಗೂ ಚನ್ನಸಂದ್ರ ಮುಖಂಡರು ಗ್ರಾಮಸ್ಥರು ಇದ್ದರು.