
ಕೋಲಾರ,ಆ,೨೪-ನೂಲಿಚಂದಯ್ಯ ಜಯಂತಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಉಪವಿಭಾಗಾಧಿಕಾರಿ ಎಚ್ ಎಸ್,ವೆಂಕಟಲಕ್ಷ್ಮಿ ತಿಳಿಸಿದರು.
ನಗರದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರುಗಳ ಸಂಯುಕ್ತ ಆಶ್ರಯದಲ್ಲಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾಯಕಯೋಗಿ ಬಸವಣ್ಣನವರ ಸಮಕಾಲಿನರಾದ ನೂಲಿಚಂದಯ್ಯ ನವರು ಪ್ರಮುಖ ಶರಣರಲ್ಲಿ ಒಬ್ಬರಾಗಿದ್ದು ತಮ್ಮ ವಚನಗಳ ಮೂಲಕ ಸಮಾಜ ತಿದ್ದುವ ಕಾರ್ಯ ಮಾಡಿದ್ದಾರೆ, ನೂಲಿಚಂದಯ್ಯ ಅವರ ಜಯಂತಿ ಆ ೩೧ರಂದು ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಸೆಪ್ಟೆಂಬರ್ ೨ ರಂದು ಜಿಲ್ಲೆಯಲ್ಲಿ ಬಹಳ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಹೇಳಿದರು.
ಸಭೆಯಲ್ಲಿ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ ಅಥವಾ ಉಪನ್ಯಾಸ ನೀಡುವ ಬಗ್ಗೆ, ಸಂಸ್ಕೃತಿಕ ಕಾರ್ಯಕ್ರಮ ಕಲಾತಂಡಗಳ ಬಗ್ಗೆ ಸಮುದಾಯದವರ ಜೊತೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರದ ಗೀತಾ, ಸಮುದಾಯದ ಮುಖಂಡರುಗಳು ಸೇರಿದಂತೆ ಮತ್ತಿತರ ಉಪಸ್ಥಿತರಿದ್ದರು.