ನೆಗೆಟಿವ್ ರಿಪೆÇೀರ್ಟ್ ಇದ್ದರೆ ಮಾತ್ರ ರಾಜ್ಯಕ್ಕೆ ಪ್ರವೇಶ

ಮೈಸೂರು, ನ.29:- ಕೊರೊನಾ ಸೋಂಕು ನಿಯಂತ್ರಿಸಲು ಮೈಸೂರು ಜಿಲ್ಲಾಡಳಿತದೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಹೆಚ್ ಪ್ರಸಾದ್ ತಿಳಿಸಿದ್ದಾರೆ.
ಕರ್ನಾಟಕ ಕೇರಳ ಬಾವಲಿ ಚೆಕ್ ಪೆÇೀಸ್ಟ್ ಪರಿಶೀಲಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು ಒಮಿಕ್ರಾನ್ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಆದರೆ ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಲೇಬೇಕು ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಮೈಸೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮೈಸೂರಲ್ಲಿ ಪತ್ತೆಯಾದ ಸೋಂಕಿತರಲ್ಲಿ ಹಲವು ಮಂದಿ ಕೇರಳದಿಂದ ವಾಪಸ್ಸಾದ ವಿದ್ಯಾರ್ಥಿಗಳೇ ಹೆಚ್ಚಾಗಿದ್ದಾರೆ, ಎರಡು ನರ್ಸಿಂಗ್ ಕಾಲೇಜುಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಉಳಿದ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ನಲ್ಲಿಟ್ಟು ನಿಗಾ ಇಡಲಾಗಿತ್ತು. ಕಳೆದ ಎರಡು ದಿನಗಳಿಂದ ಆ ಕಾಲೇಜಿನಲ್ಲಿ ಯಾವುದೇ ಹೊಸ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗದೇ ಇರುವುದು ಸಮಾಧಾನಕರ ಸಂಗತಿ. ಕೇರಳದಿಂದ ವಾಪಸ್ಸಾಗಿರುವ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ನಿಗಾ ಇಡುವಂತೆ ಎಲ್ಲಾ ನರ್ಸಿಂಗ್ ಕಾಲೇಜುಗಳಿಗೂ ಸೂಚನೆ ನೀಡಲಾಗಿದೆ, ಅಲ್ಲದೆ ಒಬ್ಬರು ಸಿಟ್ಟಿಂಗ್ ಮೆಡಿಕಲ್ ಆಫೀಸರ್ ಗಳನ್ನು ನಿಯೋಜಿಸಿಕೊಂಡು ವಿದ್ಯಾರ್ಥಿಗಳ ಆರೋಗ್ಯ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದಿದ್ದಾರೆ.
ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಕಡ್ಡಾಯವಾಗಿ 72 ಗಂಟೆ ಅವಧಿಯ ನೆಗೆಟಿವ್ ರಿಪೆÇೀರ್ಟ್ ಹೊಂದಿದ್ದವರಿಗೆ ಮಾತ್ರ ರಾಜ್ಯ ಪ್ರವೇಶಿಸಲು ಅವಕಾಶ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸರ್ಕಾರ ಸ್ವ್ಯಾಬ್ ಟೆಸ್ಟ್ ಸಂಖ್ಯೆ ಹೆಚ್ಚಳಕ್ಕೆ ಸೂಚಿಸಿದೆ, ಈ ಹಿನ್ನಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಪ್ರಸ್ತುತ ದಿನಕ್ಕೆ ಒಂದು ಸಾವಿರ ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿತ್ತು, ಇಂದಿನಿಂದ 1500 ಮಂದಿಗೆ ಸ್ವ್ಯಾಬ್ ಟೆಸ್ಟ್ ಮಾಡಲಾಗುತ್ತದೆ, ಪುರಭವನ ಸೇರಿದಂತೆ ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜನನಿಬಿಡ ಪ್ರದೇಶದಲ್ಲಿ ಮೊಬೈಲ್ ಯೂನಿಟ್ ಮೂಲಕ ಕೋವಿಡ್ ಟೆಸ್ಟ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಒಮಿಕ್ರಾನ್ ಬಗ್ಗೆ ಮೈಸೂರು ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ. ಹಾಗೆಂದ ಮಾತ್ರಕ್ಕೆ ಮಾಸ್ಕ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಬೇಜವಾಬ್ದಾರಿಯಿಂದ ಇರಬಹುದು ಎಂದರ್ಥವಲ್ಲ , ಇದುವರೆಗೂ ನಮ್ಮ ದೇಶದಲ್ಲಿ ಒಮಿಕ್ರಾನ್ ಪ್ರಕರಣ ಪತ್ತೆಯಾಗಿಲ್ಲ, ಕೇವಲ ದಕ್ಷಿಣ ಆಫ್ರಿಕಾದಲ್ಲಿ ಮಾತ್ರ ಹೊಸ ವೈರಸ್ ಒಮಿಕ್ರಾನ್ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದ್ದಾರೆ.
ನ.16 ರ ನಂತರ ಪತ್ತೆಯಾದ ಕೊರೊನಾ ಸೋಂಕಿತರ ಸ್ಯಾಂಪಲ್ ಅನ್ನು ಹೆಚ್ಚಿನ ಪರೀಕ್ಷೇಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲಾ ವರದಿಗಳಲ್ಲೂ ಒಮಿಕ್ರಾನ್ ಪತ್ತೆಯಾಗಿಲ್ಲ. ಕಡ್ಡಾಯವಾಗಿ ಎರಡು ಲಸಿಕೆ ಪಡೆದಿದ್ದರೆ ಸೋಂಕು ತಗುಲಿದ್ದರೂ ಜೀವ ಹಾನಿ ಸಂಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ, ಒಮಿಕ್ರಾನ್ ಸೋಂಕು ತಗುಲಿದರೆ ಅದು ದೇಹದಲ್ಲಿ 31 ಬಗೆ ರೂಪ ತಾಳುತ್ತದೆ. ಯಾವ ರೂಪದಲ್ಲಿದೆ ಎಂದು ತಿಳಿಯುವುದಕ್ಕೆ ಸಮಯ ಬೇಕಾಗುತ್ತದೆ, ಅಲ್ಲದೆ ವೇಗವಾಗಿ ಹರಡುತ್ತದೆ, ಈ ಹಿನ್ನೆಲೆಯಲ್ಲಿ ಲಸಿಕೆ ಪಡೆದಿದ್ದವರಿಗೆ ಹೆಚ್ಚಿನ ಪ್ರಮಾಣದ ತೊಂದರೆ ಆಗುವುದಿಲ್ಲ ಎಂದು ತಿಳಿಸಿದ್ದಾರೆ.