ನೆಟ್ಟಾರು : ಡೆಂಗ್ಯೂ ಮಾಹಿತಿ ಕಾರ್ಯಾಗಾರ-ಜಾಗೃತಿ ಅಭಿಯಾನ

ಸುಳ್ಯ, ಎ.೨೧- ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯಿತಿ ಬೆಳ್ಳಾರೆ ಇದರ ಆಶ್ರಯದಲ್ಲಿ ಅಕ್ಷಯ ಯುವಕ ಮಂಡಲ(ರಿ)ನೆಟ್ಟಾರು, ಅಕ್ಷತಾ ಮಹಿಳಾ ಮಂಡಲ ನೆಟ್ಟಾರು, ಒಡಿಯೂರು ಗ್ರಾಮ ವಿಕಾಸ ಯೋಜನೆ ನೆಟ್ಟಾರು, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘ ನೆಟ್ಟಾರು ಇವರುಗಳ ಸಹಯೋಗದೊಂದಿಗೆ ಡೆಂಗ್ಯೂ ಮಾಹಿತಿ ಕಾರ್ಯಾಗಾರ ಹಾಗೂ ಮನೆಮನೆ ಜಾಗೃತಿ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ನೆಟ್ಟಾರು ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ್ ಪನ್ನೆ ವಹಿಸಿದ್ದರು. ಬೆಳ್ಳಾರೆ ಗ್ರಾಮ ಸ್ವರಾಜ್ಯ ತಂಡದ ನಾಯಕ ಆರ್ ಕೆ ಭಟ್ ಕುರುಂಬುಡೇಲು ಪ್ರಾಸ್ತಾವಿಕ ಮಾತನಾಡಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮೇಲ್ವಿಚಾರಕ ವಾಸುದೇವ ಹಾಗೂ ಸಿಬ್ಬಂದಿ ವಸಂತಿ ಡೆಂಗ್ಯೂ ಬಗ್ಗೆ ಮಾಹಿತಿ ನೀಡಿದರು.ವೇದಿಕೆಯಲ್ಲಿ ಬೆಳ್ಳಾರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗೌರಿ ನೆಟ್ಟಾರು, ಅಕ್ಷಯ ಯುವಕ ಮಂಡಲ ನೆಟ್ಟಾರು ಅಧ್ಯಕ್ಷ ಶ್ರೀಜಿತ್ ರೈ ಮಣಿಕ್ಕಾರ ಉಪಸ್ಥಿತರಿದ್ದರು. ಶೈಲೇಶ್ ನೆಟ್ಟಾರು ಸ್ವಾಗತಿಸಿದರು. ಯುವಕ ಮಂಡಲದ ಅಧ್ಯಕ್ಷ ಶ್ರೀಜಿತ್ ರೈ ವಂದಿಸಿದರು. ವಸಂತ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು.