ನೆಟ್ಟಾರು ಹತ್ಯೆ: ಮತ್ತೆ ಮೂವರ ಸೆರೆ

ಹಾಸನ,ಮೇ.೧೦- ಬಿಜೆಪಿ ಮುಖಂಡ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ತಂಡದ ಅಧಿಕಾರಿಗಳು ಸಕಲೇಶಪುರ ತಾಲ್ಲೂಕಿನ ಆನೆಮಹಲ್‌ನಲ್ಲಿ ಮೂವರನ್ನು ಬಂಧಿಸಿದ್ದಾರೆ.
ಸುಳ್ಯದ ಮೊಹಮ್ಮದ್ ಮುಸ್ತಾಫ್ ಅಲಿಯಾಸ್ ಮುಸ್ತಾಫ್ ಪೈಚಾರು, ಸೋಮವಾರಪೇಟೆಯ ಇಲಿಯಾಸ್ ಹಾಗೂ ಸಿರಾಜ್ ಬಂಧಿತ ಆರೋಪಿಗಳಾಗಿದ್ದು, ಮೂವರನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ.
ಆನೆಮಹಲ್‌ನ ಸಿರಾಜ್ ಬಳಿ ಮೊಹಮ್ಮದ್ ಮುಸ್ತಾಫಾ ಹಾಗೂ ಇಲಿಯಾಸ್ ಕೆಲಸಕ್ಕೆ ಸೇರಿದ್ದರು. ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್‌ನನ್ನು ವಶಕ್ಕೆ ಪಡೆಯಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಮುಸ್ತಾಫ್ ಪೈಚಾರ್ ನಾಲ್ಕನೇ ಆರೋಪಿಯಾಗಿದ್ದ.
ಪ್ರವೀಣ ನೆಟ್ಟಾರು ಕೊಲೆ:
ಕಳೆದ ೨೦೨೨ರ ಜುಲೈ ೨೬ ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.
ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್?ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು.