ನೆಮ್ಮದಿಯ ಬದುಕಿಗೆ ಪರಿಸರ ಸಂರಕ್ಷಣೆ ಅತ್ಯಗತ್ಯ:ಮಲ್ಲಿಕಾರ್ಜುನ ಯರಗುದ್ರಿ

ಇಂಡಿ:ಜೂ.7: ಪ್ರಕೃತಿಯನ್ನು ಸಂರಕ್ಷಿಸುವ ಮೂಲಕ ಶಾಂತಿ, ಸೌಹಾರ್ದತೆ, ಸಮೃದ್ಧಿ ಮತ್ತು ಆರೋಗ್ಯಕ್ಕೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವ ದಿಕ್ಕಿನಲ್ಲಿ ವಿಶ್ವದ ಒಗ್ಗಟ್ಟಿನತ್ತ ಗಮನಹರಿಸುವುದು ಬಹು ಮುಖ್ಯವಾಗಿದೆ ಎಂದು ತಾಲೂಕ ಅಕ್ಷರ ದಾಸೋಹ ಅಧಿಕಾರಿ ಮಲ್ಲಿಕಾರ್ಜುನ ಯರಗುದ್ರಿ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್,ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಪರಿಸರ ಸಂರಕ್ಷಣೆಗೆ ನಾವು ಸ್ವಯಂಪ್ರೇರಿತರಾಗಿ ಗಿಡ ನೆಟ್ಟು, ನೀರು ಹಾಕಿ, ಮರಗಳನ್ನು ಬೆಳೆಸಬೇಕಿದೆ. ಪರಿಸರದ ಮೌಲ್ಯವನ್ನು ಎಲ್ಲರೂ ಅರಿತುಕೊಂಡು ಮಲಿನ ಮಾಡದಂತೆ ಸಂರಕ್ಷಣೆ ಮಾಡುವಲ್ಲಿ ಶ್ರಮವಹಿಸಬೇಕಿದೆ ಎಂದು ಹೇಳಿದರು.
ಶಿಕ್ಷಕ ಎಸ್ ಆರ್ ಚಾಳೇಕಾರ ಮಾತನಾಡಿ, ಕಾಡು ಬೆಳೆಸಿ, ನಾಡು ಉಳಿಸಿ, ಪರಿಸರ ಸಂರಕ್ಷಣೆ,ಅರಣ್ಯ ಸಂಪತ್ತು ಉಳಿಸಿ ಎಂಬುದು ಕೇವಲ ಘೋಷಣೆಗೆ ಸೀಮಿತವಾಗಬಾರದು, ಹಸುರೀಕರಣಕ್ಕೆ ಪ್ರತಿಯೊಬ್ಬರು ಕೈ ಜೋಡಿಸಿ, ನಿಮ್ಮ ಮನೆಯ ಸುತ್ತಮುತ್ತಲಿನಲ್ಲಿ ಒಂ???ಂದು ಗಿಡಗಳನ್ನು ಬೆಳೆಸಿ,ಸಂರಕ್ಷಿಸಿ ಎಂದು ಹೇಳಿದರು.
ಹಿರೇರೂಗಿ ಉರ್ದು ಸಿ ಆರ್ ಪಿ ಬಿ ಡಿ ಚಪ್ಪರಬಂಧ, ಕೆಬಿಎಸ್ ಮುಖ್ಯ ಶಿಕ್ಷಕ ಅನಿಲ ಪತಂಗಿ, ಕೆಜಿಎಸ್ ಮುಖ್ಯ ಶಿಕ್ಷಕ ಸುರೇಶ ಅಂಕಲಗಿ, ಯುಬಿಎಸ್ ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ,ಶಿಕ್ಷಕರಾದ ಎಸ್ ಎಂ ಪಂಚಮುಖಿ, ಎಸ್ ಎಸ್ ಅರಬ, ಎಸ್ ಎಂ ಮಕಾನದಾರ, ಸುರೇಶ ದೊಡ್ಯಾಳಕರ,ಎಸ್ ಡಿ ಬಿರಾದಾರ, ವಿ ವೈ ಪತ್ತಾರ,ಜೆ ಎಂ ಪತಂಗಿ,ಎಸ್ ಬಿ ಕುಲಕರ್ಣಿ,ಎಸ್ ಎನ್ ಡಂಗಿ, ಎಸ್ ಎಚ್ ಮೈದರಗಿ, ಎಸ್ ಪಿ ಪೂಜಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.