ನೆರೆಪೀಡಿತ ಪ್ರದೇಶಗಳಿಗೆ ನಾಳೆ ಸಿಎಂ ಭೇಟಿ

ಬೆಂಗಳೂರು, ಆ. ೩- ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಭೇಟಿ ನೀಡುವರು.
ಮಳೆಯಿಂದ ತೀವ್ರ ಹಾನಿಗೊಳಗಾಗಿರುವ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸೇರಿದಂತೆ ಹಲವು ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಭೇಟಿ ನೀಡಿ ಆಗಿರುವ ಹಾನಿಯನ್ನು ಖುದು ವೀಕ್ಷಿಸುವರು.
ಭಟ್ಕಳಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಇಂದು ಭಟ್ಕಳಕ್ಕೆ ತೆರಳಿ ಮನೆ ಹಾನಿ ಪ್ರದೇಶಗಳನ್ನು ವೀಕ್ಷಿಸಿ ಪರಿಹಾರ ಕಾರ್ಯಗಳಿಗೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.
ಮಂಗಳೂರಿನಲ್ಲಿ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರ ಬಂಧನ ಆಗಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದ ತನಿಖೆ ನಡೆದಿದೆ. ಈ ಸಂದರ್ಭದಲ್ಲಿ ಆರೋಪಿಗಳ ಬಂಧನ, ಇದರ ಹಿಂದೆ ಯಾರಿದ್ದಾರೆ ಎಂಬೆಲ್ಲದರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.