ನೆಲ,ಜಲ ವಿಚಾರದಲ್ಲಿ ರಾಜಿಯಿಲ್ಲ

ಹಾವೇರಿ,ಜ.೬- ನೆಲ-ಜಲ, ಭಾಷೆ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಕಾರ್ಮಿಕ ಸಚಿವ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ಹೇಳಿದರು.ಹಾವೇರಿಯಲ್ಲಿ ಇಂದಿನಿಂದ ಆರಂಭವಾಗಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಿವರಾಮ್ ಹೆಬ್ಬಾರ್‌ರವರು, ಈ ಹಿಂದೆ ಯಾವೊತ್ತು ಆಗದ ರೀತಿಯ ಸಾಹಿತ್ಯ ಸಮ್ಮೇಳನ ಇದಾಗಲಿದೆ. ಕನ್ನಡ ನೆಲ-ಜಲ, ಭಾಷೆ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದರು.ನೆಲ-ಜಲ, ಭಾಷೆ ವಿಚಾರದಲ್ಲಿ ಯಾವುದೇ ಗೊಂದವಾಗಲಿ, ತಪ್ಪು ಸಂದೇಶವಾಗಲಿ ಹೋಗಬಾರದು. ನೆಲ-ಜಲ, ಭಾಷೆ ರಕ್ಷಣೆಗೆ ಸರ್ಕಾರ ಬದ್ಧ ಎಂದರು. ಇದೇ ಸಂದರ್ಭದಲ್ಲಿ ಕ.ಸಾ.ಪ. ಅಧ್ಯಕ್ಷ ಡಾ. ಮಹೇಶ್ ಜೋಷಿ, ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರೆ, ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ. ಬಿ. ಹೀರೆಮಠ, ನಾಡಧ್ವಜ ಧ್ವಜಾರೋಹಣ ನೆರವೇರಿಸಿದರು.