`ನೆಲ್ಸನ್‍ಗೆ’  ಶ್ವೇತಾ ಡಿಸೋಜಾ ನಾಯಕಿ

ವಿನೋದ್ ಪ್ರಭಾಕರ್ ನಟನೆಯ ‘ ನೆಲ್ಸನ್” ಚಿತ್ರಕ್ಕೆ ಕರಾವಳಿ ಬೆಡಗಿ ಶ್ವೇತಾ ಡಿಸೋಜಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಹಿಂದಿ ಸಿನಿಮಾ “ವೈ” ಮೂಲಕ ಸಿನಿಮಾ ಜರ್ನಿ ಆರಂಭಿಸಿದ್ದ ಸುಂದರಿ ಖಾಸಗಿ ಪುಟಗಳು ಹಾಗೂ ಹೆಜ್ಜಾರು ಚಿತ್ರದಲ್ಲಿ ನಟಿಸಿದ್ದಾರೆ. ಹೆಜ್ಜಾರು ಚಿತ್ರ ಬಿಡುಗಡೆಗಾಗಿ ಕಾಯ್ತಿರುವ ಶ್ವೇತಾ, ಈಗ ನೆಲ್ಸನ್ ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

1960 90ರ ದಶಕದಲ್ಲಿ ಚಾಮರಾಜನಗರದಲ್ಲಿ ನಡೆಯುವ ನೈಜ ಘಟನೆಯಾಧಾರಿತ ಚಿತ್ರ ನೆಲ್ಸನ್. ಗ್ಯಾಂಗ್ ಸ್ಟರ್ ಕಥಾಹಂದರ ಹೊಂದಿದ್ದು, ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಬಿ.ಎಮ್ ಶ್ರೀರಾಮ್ ಕೋಲಾರ ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ `ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ.