ನೆಹರೂ ದೇಶಕ್ಕೆ ನೀಡಿದ ಕೊಡುಗೆ ಅಪಾರ

ಮಂಗಳೂರು, ಮೇ ೨೮- ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಪುಣ್ಯತಿಥಿಯು ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ನೆಹರೂ ದೇಶಕ್ಕೆ ನೀಡಿದ ಕೊಡುಗೆ ಅಪಾರವಾದುದು. ಕೃಷಿ, ಕೈಗಾರಿಕೆ, ರೈಲ್ವೆ ಕ್ಷೇತ್ರದಲ್ಲಿ ಕೈಗೊಂಡ ಕ್ರಾಂತಿಕಾರಕ ಅಭಿವೃದ್ಧಿಯಿಂದಾಗಿ ಜಗತ್ತು ಭಾರತದತ್ತ ಮುಖ ಮಾಡುವಂತೆ ಮಾಡಿತ್ತು ಎಂದರು. ಈ ಸಂದರ್ಭ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್. ದೊರೆಸ್ವಾಮಿ, ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಸೇರಿದಂತೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಜಿಲ್ಲಾ ಕಾಂಗ್ರೆಸ್ ಒಬಿಸಿ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕಾಧ್ಯಕ್ಷ ಲಾರೆನ್ಸ್ ಡಿಸೋಜ, ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಅಧ್ಯಕ್ಷ ಶುಭೋದಯ ಆಳ್ವ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಕಾರ್ಪೊರೇಟರ್‌ಗಳಾದ ಜೆಸಿಂತಾ ವಿಜಯ್ ಆಲ್ಫ್ರೆಡ್, ಕೇಶವ ಮರೋಳಿ, ಮುಖಂಡರಾದ ಪದ್ಮನಾಭ ಅಮೀನ್, ಮುಹಮ್ಮದ್ ಕುಂಜತ್ತಬೈಲ್, ಶಬ್ಬೀರ್ ಎಸ್, ಅಬ್ದುಲ್ ಖಾದರ್ ಏರ್‌ಪೋರ್ಟ್, ನಝೀರ್ ಬಜಾಲ್, ಸಿ.ಎಂ.ಮುಸ್ತಫಾ, ನವಾಝ್ ಜೆಪ್ಪು, ಎ.ಆರ್.ಇಮ್ರಾನ್, ಫಯಾಝ್, ಯೂಸುಫ್ ಉಚ್ಚಿಲ್ ಮತ್ತಿತರರು ಉಪಸ್ಥಿತರಿದ್ದರು.