ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬಸವಕಲ್ಯಾಣ :ಜು.26: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯದ್ಲಾಪೂರ ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ.

ಭಾಲ್ಕಿ ತಾಲೂಕಿನ ಹಲಸಿತುಗಾಂವ ಗ್ರಾಮದ ನಿವಾಸಿ ದಿನೇಶ ಮಹಾದೇವ ಸೂರ್ಯವಂಶಿ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಕಳೆದ ಕೆಲ ತಿಂಗಳಿಂದ ಯದ್ಲಾಪೂರ ಗ್ರಾಮದಲ್ಲಿರುವ ತನ್ನ ಸಂಬಂಧಿಕರ ಮನೆಯಲ್ಲೇ ನೆಲೆಸಿದ್ದ ತಡರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.