ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಸುಳ್ಯ, ಎ.೯- ಸುಳ್ಯದ ಅರಂಬೂರು ಪರಿವಾರಕಾನದಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಪರಿವಾರಕಾನ ನಿವಾಸಿ ಮೋಹನ ನಾಯಕ್ ಎಂಬವರ ಪತ್ನಿ ಅರುಣಪ್ರಭ (೫೨) ಎಂಬವರು ಬೆಳಿಗ್ಗೆ ಅಡುಗೆ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಮಾನಸಿಕ ಖಿನ್ನತೆಯೇ ಕಾರಣವೆಂದು ಬರೆದಿರುವ ಡೆತ್ ನೋಟ್ ಸಿಕ್ಕಿರುವುದಾಗಿ ತಿಳಿದುಬಂದಿದೆ. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಯನ್ನು ಅಗಲಿದ್ದಾರೆ.