ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ನಂದಿಗ್ರಾಮ(ಪ.ಬಂಗಾಳ),ಏ.೧- ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ನಂದಿಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರೊಬ್ಬರ ಮೃತದೇಹ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ತೀವ್ರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
ಮೃತ ವ್ಯಕ್ತಿಯನ್ನು ಉದಯ್ ದುಬೆ ಎಂದು ಗುರುತಿಸಲಾಗಿದೆ.
ಇತ್ತೀಚೆಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಸುವೇಂದು ಅಧಿಕಾರಿಯನ್ನು ಬೆಂಬಲಿಸಿ ನಡೆದ ಚುನಾವಣಾ ಪ್ರಚಾರದಲ್ಲಿ ಬಾಲಿವುಡ್ ನಟ ಮಿಥುನ್‌ಚಕ್ರವರ್ತಿ ನಡೆಸಿದ ರೋಡ್ ಶೋನಲ್ಲಿ ಸಾವನ್ನಪ್ಪಿರುವ ದುಬೆ ಭಾಗವಹಿಸಿದ್ದರು.
ಇದರಿಂದ ಕುಪಿತಗೊಂಡ ಟಿಎಂಸಿ ಕಾರ್ಯಕರ್ತರು ದುಬೆ ಅವರಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ ಆತ ಒತ್ತಡದಲ್ಲಿದ್ದ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಆದರೆ, ಈ ಆರೋಪವನ್ನು ಸಾರಾಸಗಟಾಗಿ ತಳ್ಳಿ ಹಾಕಿರುವ ಬಿಜೆಪಿ, ದುಬೆ ಸಾವಿನ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ತಿರುಗೇಟು ನೀಡಿದೆ. ಕೌಟುಂಬಿಕ ಸಮಸ್ಯೆಯಿಂದ ದುಬೆ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಸಂಬಂಧ ಅಸಹಜ ಸಾವಿನ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ಖಚಿತ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.