ನೇಣು ಹಾಕಿಕೊಂಡು ಮಹಿಳೆ ಆತ್ಮಹತ್ಯೆ

ಕಲಬುರಗಿ,ಆ.29-ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮತೀರ್ಥ ನಗರದಲ್ಲಿ ನಡೆದಿದೆ.
ಪುಷ್ಪಾ ತಂದೆ ಶಿವರಾಜ ಜವಳಿ ಆತ್ಮಹತ್ಯೆ ಮಾಡಿಕೊಂಡವರು.
ಇಂಜಿನಿಯರಿಂಗ್ ಓದಿದ್ದ ಪುಷ್ಪಾ ಅವರು ಕಳೆದ 4-5 ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಕೊಡಿಸಿದ್ದರೂ ಗುಣಮುಖವಾಗಿರಲಿಲ್ಲ ಎನ್ನಲಾಗಿದೆ.
ಮನೆಯಲ್ಲಿ ತಾಯಿ ಸವಿತಾ ಅವರ ಜೊತೆಯಲ್ಲಿದ್ದಾಗ ಮನೆಯ ಇನ್ನೊಂದು ಕೋಣೆಯ ಬಾಗಿಲು ಹಾಕಿಕೊಂಡು ವೇಲ್‍ನಿಂದ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪುಷ್ಪಾ ಅವರ ಸಹೋದರ ಅಭಿಷೇಕ ಜವಳಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.