ನೇಣು ಹಾಕಿಕೊಂಡು ರೈತ ಆತ್ಮಹತ್ಯೆ

ಕಲಬುರಗಿ ಏ 17: ತಾಲೂಕಿನ ಪಾಳಾ ಗ್ರಾಮದಲ್ಲಿ ಇಂದು ಬೆಳಿಗ್ಗೆ ರೈತರೊಬ್ಬರು ತಮ್ಮ ಹೊಲದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಲ್ಲಿನಾಥ ಕರಬಸಪ್ಪ ಪಾಟೀಲ (55) ನೇಣಿಗೆ ಶರಣಾದ ರೈತ. ಇವರು ರಾಷ್ಟ್ರೀಕೃತ ಬ್ಯಾಂಕೊಂದರಲ್ಲಿ 8 ರಿಂದ 9 ಲಕ್ಷ ರೂ ಸಾಲ ಪಡೆದಿದ್ದರು. ಬೆಳೆ ಕೈ ಕೊಟ್ಟು , ಬೆಳೆದ ಧಾನ್ಯಕ್ಕೆ ಯೋಗ್ಯ ಬೆಲೆ ಸಿಗದೇ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಲಬುರಗಿ ಯುನಿವರ್ಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.