
ಕಲಬುರಗಿ,ಜು.2-ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರವ ಮನೆಯಲ್ಲಿ ನೇಣು ಹಾಕಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನರಸಿಂಹ ಪ್ರಸಾದ ತಂದೆ ಮೋಹನರಾವ್ ಕುಲಕರ್ಣಿ (35) ಎಂಬುವರೆ ಮನೆಯಲ್ಲಿರುವ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.
ಸುದ್ದಿ ತಿಳಿದು ಸ್ಟೇಷನ್ ಬಜಾರ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.